News Karnataka Kannada
Sunday, May 12 2024
ದೇಶ

ಮುಕೇಶ್​ ಅಂಬಾನಿಗೆ ಮತ್ತೆ ಜೀವ ಬೆದರಿಕೆ: ಈ ಬಾರಿ 400 ಕೋಟಿ ಬೇಡಿಕೆ !

Whatsapp Image 2023 10 31 At 10.15.29 Am
Photo Credit : News Kannada

ಮುಂಬೈ: ಉದ್ಯಮಿ ಮುಕೇಶ್​ ಅಂಬಾನಿಗೆ ಮತ್ತೆ ಜೀವ ಬೆದರಿಕೆಯ ಇ-ಮೇಲ್ ಬಂದಿದ್ದು, ಈ ಬಾರಿ 400 ಕೋಟಿ ರೂ. ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಹಣವನ್ನು ನೀಡದಿದ್ದಾರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಒಂದು ವಾರದಲ್ಲಿ ಮೂರನೇ ಬಾರಿಗೆ ಬೆದರಿಕೆಯ ಇ-ಮೇಲ್ ಬಂದಿದ್ದು, ಕಂಪನಿಯ ಮೇಲ್ ಐಡಿಗೆ ಶುಕ್ರವಾರ ಮೊದಲ ಇ-ಮೇಲ್ ಬಂದಿತ್ತು, ಶನಿವಾರ ಮತ್ತೊಂದು ಇ-ಮೇಲ್ ಬಂದಿದೆ.

ಅಂಬಾನಿ ನೀಡಿದ ದೂರಿನ ಆಧಾರದ ಮೇಲೆ, ಸುಲಿಗೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ಆರೋಪಿಗಳ ವಿರುದ್ಧ ಗಾಮ​ದೇವಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಶಾದಬ್ ಖಾನ್ ಎಂಬ ಹೆಸರಿನಲ್ಲಿ ಇ-ಮೇಲ್ ಬಂದಿದ್ದು, ಈ ಪ್ರಕರಣಕ್ಕೆ ಕುರಿತು ಮುಂಬೈ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಹಿಂದಿನ ಬೆದರಿಕೆ ಇ-ಮೇಲ್‌ನಲ್ಲಿ,ನೀವು ನಮಗೆ 20 ಕೋಟಿ ರೂಪಾಯಿ ನೀಡದಿದ್ದರೆ, ನಾವು ನಿಮ್ಮನ್ನು ಕೊಲ್ಲುತ್ತೇವೆ. ನಾವು ಭಾರತದಲ್ಲಿ ಅತ್ಯುತ್ತಮ ಶೂಟರ್​ಗಳನ್ನು ಹೊಂದಿದ್ದೇವೆ ಎಂದು ಬೆದರಿಕೆ ಹಾಕಿದ್ದರು.

ಈ ಮೇಲ್ ಅನ್ನು ಯಾವ IP ವಿಳಾಸದಿಂದ ಕಳುಹಿಸಲಾಗಿದೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ವರ್ಷದ ಫೆಬ್ರವರಿ ತಿಂಗಳಲ್ಲಿ, ವ್ಯಕ್ತಿಯೊಬ್ಬರು ಮುಖೇಶ್ ಅಂಬಾನಿ ಅವರ ಮನೆ ಆಂಟಿಲಿಯಾವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದರು, ನಂತರ ಪೊಲೀಸರು ತಕ್ಷಣವೇ ಆಂಟಿಲಿಯಾ ಭದ್ರತೆಯನ್ನು ಬಿಗಿಗೊಳಿಸಲಾಗಿಸಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು