ನಾಗಾಲ್ಯಾಂಡ್‌ : ರಾಜಕೀಯ ಬೆಳವಣಿಗೆ, 21 ಶಾಸಕರು ಎನ್‌ಡಿಪಿಪಿ ಗೆ ಸೇರ್ಪಡೆ

ನಾಗಾಲ್ಯಾಂಡ್‌ ನಡೆದ ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ, ನಾಗಾ ಪೀಪಲ್ಸ್ ಫ್ರಂಟ್ (ಎನ್‌ಪಿಎಫ್) ನ 21 ಶಾಸಕರು ಶುಕ್ರವಾರ ಮುಖ್ಯಮಂತ್ರಿ ನೆಫಿಯು ರಿಯೊ ಅವರ ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೊಗ್ರೆಸಿವ್ ಪಾರ್ಟಿ (ಎನ್‌ಡಿಪಿಪಿ) ಗೆ ಸೇರ್ಪಡೆಗೊಂಡಿದ್ದಾರೆ.

ವಿಧಾನ ಸಭಾ ಚುನಾವಣೆಗೆ ಮುಂದಿನ ವರ್ಷ ಚುನಾವಣೆ ನಡೆಯಲಿದೆ. ಈ ನಡುವೆ ರಾಜ್ಯದಲ್ಲಿ ಅಚ್ಚರಿ ಮೂಡಿಸುವಂತಹ ರಾಜಕೀಯ ಬೆಳವಣೆಗೆಗಳು ಘಟಿಸುತ್ತಿವೆ.

2೧ ಎನ್‌ಪಿಎಫ್‌ ಶಾಸಕರ ಸೇರ್ಪಡೆಯೊಂದಿಗೆ 60 ಸದಸ್ಯರ ವಿಧಾನಸಭೆಯಲ್ಲಿ ಎನ್‌ಡಿಪಿಪಿ ಪಕ್ಷದ ಬಲ 42ಕ್ಕೇರಿದೆ.
ಎನ್‌ಪಿಎಫ್ ಶಾಸಕರ ಬಲ ನಾಲ್ವರು ಶಾಸಕ ಸ್ಥಾನಗಳಿಗಿಳಿದ್ದರೆ, ಬಿಜೆಪಿ 12 ಮತ್ತು ಇಬ್ಬರು ಸ್ವತಂತ್ರ ಸದಸ್ಯರಿದ್ದಾರೆ. 21 ಎನ್‌ಪಿಎಫ್ ಶಾಸಕರು ಪಕ್ಷ ಬದಲಾಯಿಸುವ ನಿರ್ಧಾರವನ್ನು ಅಸೆಂಬ್ಲಿ ಸ್ಪೀಕರ್ ಶೇರಿಂಗೈನ್ ಲಾಂಗ್‌ಕುಮರ್ ಒಪ್ಪಿಕೊಂಡಿದ್ದಾರೆ.

ನಾಗಾಲ್ಯಾಂಡ್ ನಲ್ಲಿನ ರಾಜಕೀಯ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ ರಾಜ್ಯದಲ್ಲಿ ಪ್ರತಿಪಕ್ಷಗಳಿಲ್ಲದ ʼಸರ್ವಪಕ್ಷಗಳʼ ಸರ್ಕಾರವಾದ ಯುನೈಟೆಡ್ ಡೆಮಾಕ್ರಟಿಕ್ ಅಲೈಯನ್ಸ್ (ಯುಡಿಎ) ರಚಿಸಲಾಗಿತ್ತು.

ಎನ್‌ಪಿಎಫ್, ಎನ್‌ಡಿಪಿಪಿ ಮತ್ತು ಬಿಜೆಪಿಯನ್ನು ಒಳಗೊಂಡಿರುವ ಆಡಳಿತಾರೂಢ ಪೀಪಲ್ಸ್ ಡೆಮಾಕ್ರಟಿಕ್ ಅಲಯನ್ಸ್‌ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ.

ಮುಂಬರುವ ಚುನಾವಣೆಯಲ್ಲಿ ನಾಗಾ ಪೀಪಲ್ಸ್ ಫ್ರಂಟ್ (ಎನ್‌ಪಿಎಫ್) ಸ್ವತಂತ್ರ್ಯವಾಗಿ ಸ್ಪರ್ಧಿಸುವುದಾಗಿ ಪಕ್ಷದ ಮುಖ್ಯಸ್ಥರು ಘೋಷಿಸಿದ್ದು ಪಕ್ಷದಲ್ಲಿನ ಭಿನ್ನಮತಕ್ಕೆ ಕಾರಣವಾಗಿತ್ತು. ಪ್ರಬಲವಾದ ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷವು ಒಟ್ಟಾಗಿ ಕೆಲಸ ಮಾಡುವ ಅವಶ್ಯಕತೆಯಿದೆ ಎಂದು ಪಕ್ಷಾಂತರಿ ಶಾಸಕರು ಅಭಿಪ್ರಾಯಪಟ್ಟಿದ್ದಾರೆ.

Sneha Gowda

Recent Posts

ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ: ಇಬ್ಬರು ಪೊಲೀಸರ ವಶಕ್ಕೆ

13 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

1 min ago

ನಾಳೆ ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶಕ್ಕೆ ದಿನಾಂಕ ನಿಗದಿಯಾಗಿದ್ದು, ನಾಳೆ ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

16 mins ago

ಭಾರೀ ಮಳೆಗೆ ಬೈಕ್​ ಮೇಲೆ ಉರುಳಿ ಬಿದ್ದ ಮರ: ವ್ಯಕ್ತಿ ಮೃತ್ಯು

ರಾತ್ರಿ ಸುರಿದ ಭಾರೀ ಮಳೆಗೆ ಚಲಿಸುತ್ತಿದ್ದ ಬೈಕ್​ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲೇ ಸವಾರ ಸಾವನ್ನಪ್ಪಿರುವ ಘಟನೆ ಕೋಲಾರ…

29 mins ago

ಕಾರಿನ ಮೇಲೆ ಹರಿದ ಲಾರಿ​ : 6 ಮಂದಿ ಸಾವು

ರಾಜಸ್ಥಾನದ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ಯಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ್ದಾರೆ.

31 mins ago

ಇಂದು (ಮೇ ೦8) ವಿಶ್ವ ರೆಡ್ ಕ್ರಾಸ್ ದಿನಾಚರಣೆ

ವಿಶ್ವ ರೆಡ್ ಕ್ರಾಸ್ ದಿನವನ್ನು ವಿಶ್ವದಾದ್ಯಂತ ಮೇ 8ರಂದು ಆಚರಿಸಲಾಗುತ್ತದೆ. ಸ್ವಿಸ್ ಉದ್ಯಮಿ ಮತ್ತು ವಿಶ್ವದ ಅತಿದೊಡ್ಡ ಮಾನವೀಯ ನೆರವು…

44 mins ago

ಡಿಕೆಶಿ ವಿರುದ್ಧ ಜೆಡಿಎಸ್‌-ಬಿಜೆಪಿ ಬೃಹತ್‌ ಪ್ರತಿಭಟನೆ

ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರದಲ್ಲಿ ಬುಧವಾರ ಡಿಸಿಎಂ ಡಿ.ಕೆಶಿವಕುಮಾರ್‌ ಬೃಹತ್‌ ಪ್ರತಿಭಟನೆ ನಡೆಸಲಾಗಿದೆ. ರಾಮನಗರದ ಐಜೂರು…

48 mins ago