ನಾಗಾಲ್ಯಾಂಡ್ ​​​:13 ನಾಗರಿಕರ ಹತ್ಯೆ ಪ್ರಕರಣ SITಗೆ ನೀಡಿದ ಅಮಿತ್​​ ಶಾ

ನಾಗಾಲ್ಯಾಂಡ್​​​ನಲ್ಲಿ ಭದ್ರತಾ ಪಡೆಗಳು 13 ನಾಗರಿಕರನ್ನು ಭಯೋತ್ಪಾದಕರು ಎಂದು ಭಾವಿಸಿ ಹತ್ಯೆ ಮಾಡಿರುವ ಪ್ರಕರಣದ ಕುರಿತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಇಂದು ಸಂಸತ್​​ನಲ್ಲಿ ಮಾಹಿತಿ ನೀಡಿದರು.

ಭವಿಷ್ಯದಲ್ಲಿ ಇಂತಹ ಯಾವುದೇ ಪ್ರಕರಣ ಮರುಕಳಿಸದಂತೆ ನೋಡಿಕೊಳ್ಳಲು ಎಲ್ಲ ಏಜೆನ್ಸಿಗಳಿಗೆ ಸೂಚನೆ ನೀಡಲಾಗಿದ್ದು, ಈ ದುರದೃಷ್ಟಕರ ಘಟನೆ ಬಗ್ಗೆ ಕೇಂದ್ರ ಸರ್ಕಾರ ವಿಷಾದ ವ್ಯಕ್ತಪಡಿಸುತ್ತದೆ ಎಂದು ತಿಳಿಸಿದರು.

ಡಿಸೆಂಬರ್​​​ 4ರಂದು ಆ ಪ್ರದೇಶದಲ್ಲಿ ಉಗ್ರರ ಚಲನವಲನದ ಬಗ್ಗೆ ಸೇನೆಗೆ ಮಾಹಿತಿ ಸಿಕ್ಕಿತ್ತು. ಇದರ ಆಧಾರದ ಮೇಲೆ 21 ಕಮಾಂಡೋಗಳು ಈ ಪ್ರದೇಶದಲ್ಲಿ ಕಾರ್ಯಾಚರಣೆಗೆ ಇಳಿದಿದ್ದರು.ಇದೇ ವೇಳೆ, ಸ್ಥಳಕ್ಕೆ ವಾಹನವೊಂದು ಬಂದಿದ್ದು, ನಿಲ್ಲುವಂತೆ ಸೂಚನೆ ನೀಡಲಾಗಿತ್ತು. ಆದರೆ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದ್ದರಿಂದ ಉಗ್ರರು ಇರಬಹುದು ಎಂಬ ಶಂಕೆಯ ಮೇರೆಗೆ ಸೇನಾ ಸಿಬ್ಬಂದಿ ಗುಂಡು ಹಾರಿಸಿದ್ದಾರೆಂದು ಗೃಹ ಸಚಿವರು ಮಾಹಿತಿ ನೀಡಿದರು.

ವಾಹನದಲ್ಲಿದ್ದ ಎಂಟು ಜನರ ಪೈಕಿ ಆರು ಮಂದಿ ಸಾವನ್ನಪ್ಪಿದ್ದಾರೆ. ಇದರ ಬೆನ್ನಲ್ಲೇ ತಪ್ಪಾದ ಗುರುತು ಎಂದು ಕಂಡುಬಂದಿದ್ದು, ಗಾಯಗೊಂಡಿರುವ ಇಬ್ಬರನ್ನ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಪ್ರಕರಣದ ಸುದ್ದಿ ತಿಳಿದ 250ಕ್ಕೂ ಗ್ರಾಮಸ್ಥರು ಸೇನಾ ಘಟಕವನ್ನು ಸುತ್ತುವರಿದು ಅಲ್ಲಿನ ವಾಹನಗಳಿಗೆ ಬೆಂಕಿ ಹಚ್ಚುವ ಮೂಲಕ ದಾಳಿ ನಡೆಸಿದರು.ಈ ವೇಳೆ ಓರ್ವ ಯೋಧ ಸಾವನ್ನಪ್ಪಿದ್ದು, ಕೆಲ ಯೋಧರು ಗಾಯಗೊಂಡಿದ್ದಾರೆ.

ಪರಿಸ್ಥಿತಿ ಹತೋಟಿಗೆ ತರುವ ಉದ್ದೇಶದಿಂದ ಸೇನೆ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಮತ್ತೆ ಏಳು 7 ನಾಗರಿಕರು ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾಗಿ ಮಾಹಿತಿ ನೀಡಿದರು.

ಪ್ರಕರಣವನ್ನ ಈಗಾಗಲೇ ಎಸ್​​ಐಟಿಗೆ ನೀಡಲಾಗಿದ್ದು, ಮುಂದಿನ 30 ದಿನದೊಳಗೆ ಸಂಪೂರ್ಣ ತನಿಖಾ ವರದಿ ಒಪ್ಪಿಸುವಂತೆ ಸೂಚನೆ ನೀಡಲಾಗಿದೆ ಎಂದಿರುವ ಗೃಹ ಸಚಿವರು, ಸ್ಥಳದಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ ಎಂಬ ಮಾಹಿತಿ ನೀಡಿದರು.

Sneha Gowda

Recent Posts

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

8 mins ago

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

23 mins ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

51 mins ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

1 hour ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

2 hours ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

2 hours ago