ಕೊಹಿಮಾ: ಮಾ.7ರಂದು ನಾಗಾಲ್ಯಾಂಡ್‌ನಲ್ಲಿ ಎನ್‌ಡಿಪಿಪಿ ಸರ್ಕಾರ ಅಸ್ತಿತ್ವಕ್ಕೆ

ಕೊಹಿಮಾ: ಆಡಳಿತಾರೂಢ ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್‌ಡಿಪಿಪಿ), ಮಿತ್ರ ಪಕ್ಷವಾದ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಜೊತೆಗೆ 60 ಸದಸ್ಯ ಬಲದ ವಿಧಾನಸಭೆಯಲ್ಲಿ 37 ಸ್ಥಾನಗಳನ್ನು ಗೆಲ್ಲುವ ಮೂಲಕ ನಾಗಾಲ್ಯಾಂಡ್‌ನಲ್ಲಿ ಸತತ ಎರಡನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಂಡಿದೆ. ಮಾರ್ಚ್ 7 ರಂದು ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ.

ಮಾರ್ಚ್ 7 ರಂದು ಕೊಹಿಮಾದಲ್ಲಿ ಮುಖ್ಯಮಂತ್ರಿ ಮತ್ತು ಇತರ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಬಿಜೆಪಿ ನಾಯಕರು ಮತ್ತು ಸಚಿವರು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಶುಕ್ರವಾರ ಎನ್‌ಡಿಪಿಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ನಿರ್ಗಮಿತ ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರು ಶನಿವಾರ ರಾಜ್ಯಪಾಲ ಲಾ ಗಣೇಶನ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಭಾನುವಾರ ಮೈತ್ರಿ ಪಾಲುದಾರ ಬಿಜೆಪಿಯೊಂದಿಗಿನ ಸಭೆಯ ನಂತರ ರಿಯೊ ಸೋಮವಾರ ಮುಂದಿನ ಸರ್ಕಾರ ರಚಿಸಲು ಹಕ್ಕುಮಂಡನೆ ಸಾಧ್ಯತೆಯಿದೆ ಎಂದು ಎನ್‌ಡಿಪಿಪಿ ಮೂಲಗಳು ತಿಳಿಸಿವೆ. ನಾಗಾಲ್ಯಾಂಡ್‌ನ ಸುದೀರ್ಘ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ರಿಯೊ (72) ಮಾರ್ಚ್ 7 ರಂದು 5ನೇ ಬಾರಿಗೆ ಉನ್ನತ ಹುದ್ದೆಯನ್ನು ಅಲಂಕರಿಸಲಿದ್ದಾರೆ.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago