Categories: ದೇಶ

ಜನವರಿ 25: ಇಂದು ರಾಷ್ಟ್ರೀಯ ಮತದಾರರ ದಿನ

ದೆಹಲಿ: ಪ್ರತಿವರ್ಷ ಜನವರಿ 25 ರಂದು ಭಾರತದಲ್ಲಿ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಆ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ದೇಶದ ಜನರನ್ನು (ಮತದಾರರನ್ನು) ಉತ್ತೇಜಿಸುವ ಕೆಲಸ ಮಾಡಲಾಗುತ್ತದೆ. ಈ ವರ್ಷ ಮತದಾರರ ದಿನ 14ನೇ ಆವೃತ್ತಿಯನ್ನು ಆಚರಿಸಲಾಗುತ್ತಿದೆ.

ಅದರಂತೆ ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವರ್ಚುವಲ್ ಮೂಲಕ ಮೊದಲ ಬಾರಿ ಮತ ಚಲಾಯಿಸುವ ಒಂದು ಕೋಟಿಗೂ ಹೆಚ್ಚು ಯುವ ಮತದಾರರೊಂದಿಗೆ ಸಂವಾದ ನಡೆಸಲಿದ್ದಾರೆ.

2011ರ ಜನವರಿ 25 ರಂದು ಮೊದಲ ಬಾರಿ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಯಿತು. ಹೆಚ್ಚು ಹೆಚ್ಚು ಯುವ ಮತದಾರರನ್ನು ಚುನಾವಣಾ ಪ್ರಕ್ರಿಯೆಯನ್ನು ಭಾಗವಹಿಸುವಂತೆ ಉತ್ತೇಜಿಸಲು ಆಗ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರವು ಕಾನೂನು ಸಚಿವಾಲಯದ ಪ್ರಸ್ತಾವನೆಯನ್ನು ಅನುಮೋದಿಸಿತು. ಅಂದಿನಿಂದ ಈ ದಿನದ ಆಚರಣೆ ಜಾರಿಗೆ ಬಂದಿತು.

18 ವರ್ಷ ತುಂಬಿದ ಹೊಸ ಮತದಾರರು ಮತದಾರರ ಪಟ್ಟಿ ತಮ್ಮ ಹೆಸರು ನೋಂದಾಯಿಸಲು ನಿರಾಸಕ್ತಿ ತೋರುತ್ತಿದ್ದಾರೆ ಎಂಬ ಅಂಶವನ್ನಯ ತಿಳಿಸುವ ಮೂಲಕ ಮಾಹಿತಿ ಮತ್ತು ಪ್ರಸಾರ ಖಾತೆಯ ಮಾಜಿ ಸಚಿವೆ ಅಂಬಿಕಾ ಸೋನಿ ಆ ಸಮಯದಲ್ಲಿ ಎಲ್ಲ ಗಮನ ಸೆಳೆದಿದ್ದರು.

ಈ ಸಮಸ್ಯೆಯನ್ನು ಬಗೆಹರಿಸಲು ಚುನವಣಾ ಆಯೋಗವು ಭಾರತದಾದ್ಯಂತ ಎಲ್ಲಾ ಮತಗಟ್ಟೆಗಳಲ್ಲಿ ಪ್ರತಿವರ್ಷ ಜನವರಿ 1 ರಂದು 18 ವರ್ಷ ತುಂಬಿದ ಅರ್ಹ ಮತದಾರರನ್ನು ಗುರುತಿಸಲು ರಾಷ್ಟ್ರವ್ಯಾಪಿ ಪ್ರಯತ್ನ ಮಾಡಲು ಪ್ರಾರಂಭಿಸಲು ನಿರ್ಧರಿಸಲಾಯಿತು. ಹೀಗೆ ಯುವ ಮತದಾರರನ್ನು ನೋಂದಾಯಿಸಿ ಜನವರಿ 25 ರಂದು ಅವರಿಗೆ ಚುನಾವಣಾ ಗುರುತಿನ ಚೀಟಿ ನೀಡಲಾಗುವುದು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ವರ್ಷ ನವದೆಹಲಿಯಲ್ಲಿ ಭಾರತದ ಚುನಾವಣಾ ಆಯೋಗ ಆಯೋಜಿಸಿರುವ ರಾಷ್ಟ್ರೀಯ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಅರ್ಜುನ್ ರಾಮ್ ಮೇಘವಾಲ್ ಅವರು ಗೌರವ ಅತಿಥಿಯಾಗಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಇನ್ನು ಈ ವರ್ಷದ ಥೀಮ್: ‘ಮತದಾನಕ್ತಿಂತ ಹೆಚ್ಚು ಯಾವುದೂ ಇಲ್ಲ, ನಾನು ಖಂಡಿತವಾಗಿ ಮತದಾನ ಮಾಡುತ್ತೇನೆ’ ಎಂಬುವುದಾಗಿದೆ. ಇದು ಕಳೆದ ವರ್ಷದ ಥೀಮ್‌ನ ಮುಂದುವರಿಕೆಯಾಗಿದೆ.ಆಚರಣೆಯ ಅಂಗವಾಗಿ, ಎಲ್ಲಾ ಸರ್ಕಾರಿ ಕಚೇರಿಗಳು, ಸ್ವಾಯತ್ತ ಸಂಸ್ಥೆಗಳು ಮತ್ತು ಸಂಸ್ಥೆಗಳು ಪ್ರತಿಜ್ಞೆಯನ್ನು ಸ್ವೀಕರಿಸುತ್ತವೆ. ‘ಭಾರತದ ಪ್ರಜೆಗಳಾದ ನಾವು, ಪ್ರಜಾಪ್ರಭುತ್ವದಲ್ಲಿ ಅಚಲವಾದ ನಂಬಿಕೆಯನ್ನು ಹೊಂದಿದ್ದೇವೆ. ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳನ್ನು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿಹಿಡಿಯಲು ಮತ್ತು ಪ್ರತಿ ಚುನಾವಣೆಯಲ್ಲಿ ನಿರ್ಭೀತವಾಗಿ ಮತ್ತು ಪ್ರಭಾವಕ್ಕೆ ಒಳಗಾಗದೆ ಮತದಾನ ಮಾಡಲು ಈ ಮೂಲಕ ಪ್ರತಿಜ್ಞೆ ಮಾಡುತ್ತೇವೆ” ಎಂಬುದಾಗಿದೆ.

Ashitha S

Recent Posts

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

10 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

43 mins ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

57 mins ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

1 hour ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

2 hours ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

2 hours ago