ನವದೆಹಲಿ: ಮಣಿಪುರದಲ್ಲಿ ಹಿಂಸಾಚಾರ ಪ್ರಾರಂಭವಾದ ಮೂರು ತಿಂಗಳ ನಂತರ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಪಾಲುದಾರ ಕುಕಿ ಪೀಪಲ್ಸ್ ಅಲೈಯನ್ಸ್ (ಕೆಪಿಎ) ಭಾನುವಾರ ಎನ್ ಬಿರೇನ್ ಸಿಂಗ್ ಅವರ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿದೆ.
ಕುಕಿ ಪೀಪಲ್ಸ್ ಅಲೈಯನ್ಸ್ ರಾಜ್ಯ ವಿಧಾನಸಭೆಯಲ್ಲಿ ಇಬ್ಬರು ಶಾಸಕರನ್ನು ಹೊಂದಿದೆ. “ಮಣಿಪುರ ಸರ್ಕಾರಕ್ಕೆ ಕೆಪಿಎ ಬೆಂಬಲ… ಇದನ್ನು ಅನೂರ್ಜಿತ ಎಂದು ಪರಿಗಣಿಸಬಹುದು” ಎಂದು ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ.