Categories: ದೇಶ

ಸಿಯುಇಟಿ ಪರೀಕ್ಷೆ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಯುಜಿಸಿ

ವದೆಹಲಿ: ಈ ಹಿಂದೆ ಘೋಷಿಸಿದಂತೆ ಬರುವ ಮೇ 15 ಮತ್ತು ಮೇ 31ರ ನಡುವೆ ವಿಶ್ವವಿದ್ಯಾಲಯ ಸಾಮಾನ್ಯ ಪ್ರವೇಶಾತಿ ಪರೀಕ್ಷೆ (ಸಿಯುಇಟಿ)- ಯುಜಿ ನಡೆಯಲಿವೆ. ಲೋಕಸಭೆ ಚುನಾವಣೆ ನಿಗದಿಯಾಗಿರುವ ಕಾರಣ ಪರೀಕ್ಷೆ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ)ದ ಅಧ್ಯಕ್ಷ ಜಗದೀಶ್‌ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಅಲ್ಲದೇ ಪರೀಕ್ಷೆಗೆ ನೋಂದಣಿ ಪ್ರಕ್ರಿಯೆ ಮುಗಿದ ಬಳಿಕ ಪರೀಕ್ಷಾ ದಿನಾಂಕ, ವೇಳಾಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು. ಆದಾಗ್ಯೂ ಈ ತಿಂಗಳ ಆರಂಭದಲ್ಲಿ ಈ ಬಗ್ಗೆ ಮಾತನಾಡಿದ್ದ ಯುಜಿಸಿ ಅಧ್ಯಕ್ಷ ಜಗದೀಶ್‌ ‘ಮುಂಬರುವ ಲೋಕಸಭೆ ಚುನಾವಣೆಯ ದಿನಾಂಕದ ಆಧಾರದಲ್ಲಿ ಪರೀಕ್ಷೆ ದಿನಾಂಕವನ್ನು ಬದಲಾಯಿಸಬಹುದು’ ಎಂದಿದ್ದರು.

ದೇಶದ 543 ಲೋಕಸಭೆ ಸ್ಥಾನಗಳಿಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಏ.19ರಂದು ಮೊದಲ ಹಂತದಲ್ಲಿ 102 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಹಾಗೂ ಜೂನ್‌ 4ರಂದು ಮತ ಎಣಿಕೆ ನಡೆಸಲಾಗುತ್ತದೆ ಎಂದು ಕಳೆದ ಶನಿವಾರ ಚುನಾವಣಾ ಆಯೋಗ ಘೋಷಣೆ ಮಾಡಿದೆ.

ಈ ಮೊದಲೇ ಘೋಷಿಸಿರುವಂತೆ ರಾಷ್ಟ್ರೀಯ ಪರೀಕ್ಷಾ ಮಂಡಳಿಯು ಮೇ 15ರಿಂದ 31ರವರೆಗೆ ಸಿಯುಇಟಿ- ಯುಜಿ ಪರೀಕ್ಷೆಗಳನ್ನು ನಡೆಸುವುದಾಗಿ ಘೋಷಿಸಿದೆ. ಈ ಅವಧಿಯಲ್ಲಿ ಮೇ 20 ಮತ್ತು ಮೇ 25ರಂದು ಎರಡು ಬಾರಿ ದೇಶದ ವಿವಿಧೆಡೆ ಚುನಾವಣೆ ನಿಗದಿಯಾಗಿದೆ.

ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಇದೇ 26ರಂದು ಕೊನೆಯ ದಿನಾಂಕ. ಬಳಿಕ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಪ್ರದೇಶವಾರು ಹಂಚಿಕೆ ಬಗ್ಗೆ ತಿಳಿದು ಕೊಳ್ಳುತ್ತೇವೆ. ಈ ಅಂಕಿಅಂಶದ ಆಧಾರದ ಮೇಲೆ ಪರೀಕ್ಷಾ ಮಂಡಳಿಯು ವೇಳಾಪಟ್ಟಿ ಪ್ರಕಟಿಸಲಿದೆ. ಹಾಗಿದ್ದರೂ ನಿಗದಿತ ದಿನಾಂಕಗಳನ್ನು ಬದಲಾಯಿಸುವುದಿಲ್ಲ ಎಂದು ಜಗದೀಶ್‌ ತಿಳಿಸಿದ್ದಾರೆ.

Ashitha S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago