ನವದೆಹಲಿ: ಪ್ರಧಾನಿ ಮೋದಿ ನೃತ್ಯ ಮಾಡುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆ ವಿಡಿಯೋದಲ್ಲಿರುವ ವ್ಯಕ್ತಿ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಗರ್ಬಾ ನೃತ್ಯ ಮಾಡುವ ರೀತಿ ಬಿಂಬಿಸಿದ್ದ ಡೀಪ್ಫೇಕ್ ವಿಡಿಯೊವನ್ನು ನಾನೇ ನೋಡಿದ್ದೆ ಎಂದು ಮೋದಿ ಹೇಳಿದ್ದರು. ಈ ಹೇಳಿಕೆಯ ನಂತರ ಸಾಮಾಜಿಕ ಜಾಲತಾಣದಲ್ಲಿ ಗರ್ಬಾ ನೃತ್ಯದ ವಿಡಿಯೋ ವೈರಲ್ ಆಗಿತ್ತು.
ಈಗ ವಿಡಿಯೋದಲ್ಲಿರುವ ವ್ಯಕ್ತಿ ಪ್ರತಿಕ್ರಿಯೆ ನೀಡಿದ್ದಾರೆ. ನರೇಂದ್ರ ಮೋದಿ ಅವರನ್ನೇ ಹೋಲುವ ವಿಕಾಸ್ ಮಹಾಂತೆ ಪ್ರತಿಕ್ರಿಯಿಸಿ, ಗರ್ಬಾ ನೃತ್ಯದಲ್ಲಿ ಕಾಣಿಸಿಕೊಂಡಿರುವುದು ನಾನೇ. ಅದು ಡೀಪ್ ಫೇಕ್ ವಿಡಿಯೊ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಮಹಾರಾಷ್ಟ್ರದ ಮಲಾಡ್ನಲ್ಲಿ ಉದ್ಯಮಿಯಾಗಿರುವ ವಿಕಾಸ್ ಮಹಾಂತೆ ಅವರು ನರೇಂದ್ರ ಮೋದಿ ಅವರನ್ನೇ ಹೋಲುತ್ತಾರೆ. ಈ ಕಾರಣದಲ್ಲಿ ಹಲವು ಬಾರಿ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರವನ್ನೂ ಮಾಡಿದ್ದಾರೆ. ಬಿಜೆಪಿ ಬೆಂಬಲಿಗರು ಆಯೋಜಿಸುವ ಹಲವು ಕಾರ್ಯಕ್ರದ ಉದ್ಘಾಟನೆಯನ್ನು ಇವರೇ ಮಾಡುತ್ತಿದ್ದಾರೆ. ಮೋದಿ ಬಯೋಪಿಕ್ನಲ್ಲಿ ಇವರು ಅಭಿನಯಸಿದ್ದಾರೆ. ಪ್ರಧಾನಿ ಅನುಮತಿ ನೀಡಿದ ಬಳಿಕ ಮುಂದಿನ ವರ್ಷದ ಆರಂಭದಲ್ಲಿ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆಯಿದೆ ಎನ್ನಲಾಗ್ತಿದೆ.