News Karnataka Kannada
Monday, April 22 2024
Cricket
ಒಡಿಸ್ಸಾ

ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಿದ ಒಡಿಶಾ ಸರ್ಕಾರ

Anganavadi
Photo Credit :

ಭುವನೇಶ್ವರ, ಜ. 09 : ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸಿಹಿಸುದ್ದಿಯನ್ನು ನೀಡಿದ್ದಾರೆ. ಒಡಿಶಾ ಮುಖ್ಯಮಂತ್ರಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಆರ್ಥಿಕ ಪ್ರೋತ್ಸಾಹಧನವನ್ನು ಹೆಚ್ಚಳ ಮಾಡಿ ಘೋಷಣೆ ಮಾಡಿದ್ದಾರೆ. ಹಾಗೆಯೇ ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಸಹಿತ ವೈದ್ಯಕೀಯ ರಜೆಯನ್ನು ಕೂಡಾ ಘೋಷಣೆ ಮಾಡಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ಆರ್ಥಿಕ ಪ್ರೋತ್ಸಾಹಧನವನ್ನು 20,000 ರೂ.ಗಳಿಂದ 40,000 ರೂ.ಗೆ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ (ಸಿಎಂಒ) ಹೇಳಿಕೆಯಲ್ಲಿ ಉಲ್ಲೇಖಿಸಿದೆ. ಇನ್ನು ಸಣ್ಣ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಕ್ರಮವಾಗಿ 30,000 ಮತ್ತು 20,000 ರೂಪಾಯಿಗೆ ಸಹಾಯ ಧನ ಹೆಚ್ಚಳ ಮಾಡಲಾಗಿದೆ. ಈ ಹಿಂದೆ ರಾಜ್ಯದ ಸಣ್ಣ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಕ್ರಮವಾಗಿ 15,000 ಮತ್ತು 10,000 ಆರ್ಥಿಕ ಪ್ರೋತ್ಸಾಹಧನ ನೀಡಲಾಗುತ್ತಿತ್ತು.

ಸಾಮಾಜಿಕ ಭದ್ರತೆಯ ಹಿನ್ನೆಲೆಯಿಂದಾಗಿ ಅಂಗನವಾಡಿ ಕಾರ್ಯಕರ್ತೆಯರು, ಸಣ್ಣ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ 62 ವರ್ಷ ಆದ ಬಳಿಕ ಒಡಿಶಾ ರಾಜ್ಯ ಸರ್ಕಾರವು ಪ್ರೋತ್ಸಾಹಧನವನ್ನು ನೀಡುತ್ತಿದೆ. ಇನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಜನವರಿ 1, 2019 ರಿಂದ ಪೂರ್ವಾನ್ವಯವಾಗುವಂತೆ ಆರ್ಥಿಕ ಪ್ರೋತ್ಸಾಹವನ್ನು ನೀಡಲಾಗುವುದು ಎಂದು ಸಿಎಂಒ ಹೇಳಿಕೆಯಲ್ಲಿ ಸೇರ್ಪಡೆ ಮಾಡಲಾಗಿದೆ.

ಇನ್ನು ಒಡಿಶಾ ಸರ್ಕಾರದ ಈ ಕ್ರಮದಿಂದಾಗಿ ಒಟ್ಟು 1.3 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು ಪ್ರಯೋಜನ ಪಡೆಯಲಿದ್ದಾರೆ. 2019ರ ಜನವರಿಯಿಂದ ಇಲ್ಲಿಯವರೆಗೆ 1,991 ಅಂಗನವಾಡಿ ಕಾರ್ಯಕರ್ತೆಯರು, ಸಣ್ಣ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಈ ಪ್ರಯೋಜನವನ್ನು ಪಡೆಯಲಿದ್ದಾರೆ.

ಅಂಗನವಾಡಿ ಕಾರ್ಯಕರ್ತರಿಗೆ ವೇತನ ಸಹಿತ ವೈದ್ಯಕೀಯ ರಜೆ

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಶನಿವಾರ ರಾಜ್ಯದಲ್ಲಿ “ಮಿಷನ್ ಶಕ್ತಿ” ಅಡಿಯಲ್ಲಿ ಪಂಚಾಯತ್ ಮಟ್ಟದಲ್ಲಿ ಕೆಲಸ ಮಾಡುವ 50,000 ಸಮುದಾಯ ಸಹಾಯಕ ಸಿಬ್ಬಂದಿಗೆ ಆರ್ಥಿಕ ಪ್ಯಾಕೇಜ್‌ ಅನ್ನು ಘೋಷಣೆ ಮಾಡಿದ್ದಾರೆ. ಈ ಸಂದರ್ಭದಲ್ಲೇ ವೇತನ ಸಹಿತ ವೈದ್ಯಕೀಯ ರಜೆ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಸೇವೆಯಿಂದ ನಿವೃತ್ತರಾದವರಿಗೆ ಒಂದು ಬಾರಿಯ ಪ್ರೋತ್ಸಾಹಧನವನ್ನು ದ್ವಿಗುಣಗೊಳಿಸುವುದಾಗಿಯೂ ಘೋಷಿಸಿದರು. “ಎಲ್ಲಾ ಸಮುದಾಯದ ಬೆಂಬಲ ಸಿಬ್ಬಂದಿ ವಾರ್ಷಿಕ 1,000 ರೂ.ಗಳ ಏಕರೂಪದ ಭತ್ಯೆಯನ್ನು ಪಡೆಯುತ್ತಾರೆ. ಇನ್ನು ಆದ್ಯತೆಯ ಮೇರೆಗೆ ಸ್ಮಾರ್ಟ್‌ಫೋನ್ ಖರೀದಿಸಲು 5,000 ರೂ.ಗಳ ಒಂದು ಬಾರಿ ಆರ್ಥಿಕ ಸಹಾಯವನ್ನು ನೀಡಲಾಗುವುದು,” ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ಹೇಳಿಕೆ ತಿಳಿಸಿದೆ .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು