News Karnataka Kannada
Sunday, April 14 2024
Cricket
ಒಡಿಸ್ಸಾ

ಒಡಿಯಾ ಭಾಷೆಯ ಖ್ಯಾತ ಗಾಯಕ ಪ್ರಫುಲ್ಲ ಕರ್ ವಿಧಿವಶ

Prafullla Kar
Photo Credit : Twitter

ಭುವನೇಶ್ವರ:  ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಒಡಿಯಾ ಭಾಷೆಯ ಖ್ಯಾತ ಸಂಗೀತಗಾರ ಮತ್ತು ಗಾಯಕ ಪ್ರಫುಲ್ಲ ಕರ್ ವಿಧಿವಶರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಭುವನೇಶ್ವರದ ಸತ್ಯನಗರದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ಇಂದು ಪುರಿಯಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ.

1939ರಲ್ಲಿ ಜನಿಸಿದ ಕರ್ ಅವರು ಮೇರು ಸಂಗೀತಗಾರ, ಗಾಯಕ, ಗೀತರಚನೆಕಾರ, ಬರಹಗಾರರಾಗಿ ಬಹುಮುಖ ಪ್ರತಿಭೆಯಾಗಿದ್ದರು. ತಮ್ಮ ಹಲವು ದಶಕಗಳ ಸುಪ್ರಸಿದ್ಧ ವೃತ್ತಿಜೀವನದಲ್ಲಿ ಮಾಂತ್ರಿಕ ಸ್ವರ ಮತ್ತು ಸಂಗೀತ ರಚನೆಯ ಮೂಲಕ ದೇಶದ ಸಂಗೀತ ಪ್ರಿಯರನ್ನು ಮಂತ್ರಮುಗ್ಧಗೊಳಿಸಿದ್ದರು.

ಕಲೆ ಮತ್ತು ಸಂಗೀತ ಕ್ಷೇತ್ರಕ್ಕೆ ಅವರ ಅಮೂಲ್ಯ ಕೊಡುಗೆಗಾಗಿ 2015ರಲ್ಲಿ ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.

ಪ್ರಫುಲ್ಲ ಕರ್ ಅವರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಒಡಿಯಾ ಸಂಸ್ಕೃತಿ ಮತ್ತು ಸಂಗೀತ ಕ್ಷೇತ್ರಕ್ಕೆ ನೀಡಿರುವ ಅತ್ಯುನ್ನತ ಕೊಡುಗೆಗಾಗಿ ಚಿರಸ್ಥಾಯಿಯಾಗಿರುತ್ತಾರೆ ಎಂದು ಮೋದಿ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು