ಒಡಿಸ್ಸಾ

ಒಡಿಶಾ: ಪುರಿಯಲ್ಲಿ 3 ಕೋಟಿ ಮೌಲ್ಯದ ಮಾದಕವಸ್ತು ವಶಕ್ಕೆ

ಒಡಿಶಾ: ಪುರಿಯ ಮಂಗಲ ಘಾಟ್‌ ಚಕ್ಕಾ ಪ್ರದೇಶದಲ್ಲಿ 3 ಕೋಟಿ ಬೆಲೆಬಾಳುವ ಸುಮಾರು 3 ಕೆಜಿ ಮಾದಕದ್ರವ್ಯವನ್ನು ಪೋಲೀಸರು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೋಲೀಸರು 3.12 ಕೆಜಿ ಮೌಲ್ಯದ ಬ್ರೌನ್‌ ಶುಗರ್‌ ಅನ್ನು ವಶಪಡಿಸಿಕೊಂಡಿದ್ದು ಮೂರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಒಡಿಶಾ ಪೋಲೀಸ್‌ ವಿಭಾಗದ ಸ್ಪೆಷಲ್‌ ಟಾಸ್ಕ್‌ ಫೋರ್ಸ್‌ ವತಿಯಿಂದ ಕಾರ್ಯಾಚರಣೆ ನಡೆಸಲಾಗಿದೆ. ಬಂಧಿತರನ್ನು ಸುಶಾಂತ್‌ ಪಟ್ನಾಯಕ್‌ ಅಲಿಯಾಸ್‌ ನಂದಾ, ರಾಜ್‌ ಕಿಶೋರ್‌ ಸಾಹೂ, ,ಮಾನಸ್‌ ಸಾಹೂ ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಗಳು ಅಂತರ್‌ ಜಿಲ್ಲಾ ಡ್ರಗ್‌ ಪೂರೈಕೆದಾರರಾಗಿದ್ದರು ಎನ್ನಲಾಗಿದೆ. ಬಂಧಿತರಿಂದ 20 ಸಾವಿರ ನಗದು, ನಾಲ್ಕು ಮೊಬೈಲ್‌, ಒಂದು ಕ್ಯಾಶ್‌ ಕೌಂಟಿಂಗ್‌ ಮಸೀನ್‌ ಹಾಗೂ ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಇದು ಇಲ್ಲಿಯವರೆಗಿನ ಒಡಿಶಾ ಪೋಲೀಸ್‌ ಕಾರ್ಯಾಚರಣೆಯಲ್ಲಿ ಅತಿ ದೊಡ್ಡದು ಎನ್ನಲಾಗಿದ್ದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

Sneha Gowda

Recent Posts

ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು

ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.

6 mins ago

ಎಸ್‌ಎಸ್‌ಎಲ್‌ಸಿ ಗ್ರೇಸ್ ಮಾರ್ಕ್ಸ್‌ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ

ಈ ಬಾರಿಯ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು…

9 mins ago

ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟ: ಮನೆಯ ವಸ್ತುಗಳು ಬೆಂಕಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.

17 mins ago

ಪಂದ್ಯದ ವೇಳೆ ಮಳೆ ಬಾರದಂತೆ ಆರ್​ಸಿಬಿ ಆಟಗಾರರಿಂದ ಕೃಷ್ಣ ನಾಮ ಜಪ

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ನಾಳೆ ನಡೆಯುವ ಮಹತ್ವದ ಪಂದ್ಯದಲ್ಲಿ ಆರ್​ಸಿಬಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದರೂ ಕೂಡ ಪಂದ್ಯಕ್ಕೆ ಮಳೆ…

25 mins ago

ಪುತ್ತೂರು: ಹೋರಿಗಾಗಿ ದೈವದ ಮೊರೆ ಹೋದ ಬಜರಂಗದಳ

ಇಲ್ಲಿನ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳು ಮೇ.1 ರಿಂದ ನಾಪತ್ತೆಯಾಗಿರುವ ಘಟನೆಯೊಂದು ವರದಿಯಾಗಿದೆ. ಇದರ ಪತ್ತೆಗಾಗಿ ಬಜರಂಗದಳ ಇದೀಗ…

40 mins ago

ರೈತರಿಗೆ ಬೀಜ, ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

42 mins ago