News Karnataka Kannada
Saturday, May 11 2024
ಒಡಿಸ್ಸಾ

ಪುರಿ: ಐದು ವರ್ಷದ ಮಗುವಿನ ಮೇಲೆ ಅತ್ಯಾಚಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾಲೆಗೆ ಹೋಗಿ ಬರುತ್ತಿದ್ದ ವಿದ್ಯಾರ್ಥಿನಿ ಮೇಲೆ ಖಾಸಗಿ ಬಸ್​ ಕ್ಲೀನರ್ ಅತ್ಯಾಚಾರ ಎಸಗಿದ ಘಟನೆ ಸಂಭವಿಸಿದೆ.
Photo Credit : IANS

ಪುರಿ : ಅಂಕಲ್, ಅಂಕಲ್ ಎಂದು ಬಾಯಿ ತುಂಬಾ ಕರೆಯುತ್ತಿದ್ದ ಮುಗ್ದೆ, ಕೇವಲ 5 ವರ್ಷದ ಮಗುವಿನ ಮೇಲೆ ಪಾಪಿಯೊಬ್ಬ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ನಡೆದಿದೆ.

ಈ ಘಟನೆ ಒಡಿಶಾದ ಪುರಿಯಲ್ಲಿ ನಡೆದಿದ್ದು, ತೀವ್ರ ಅಸ್ವಸ್ಥವಾಗಿರುವ ಪುಟ್ಟ ಬಾಲಕಿ ಸಾವು – ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದೆ. ಪಕ್ಕದ ಮನೆಯಲ್ಲಿಯೇ ಇದ್ದ ಪಾಪಿ ಮಹೇಶ್ ಮೊಹಂತಿ(35) ಪಕ್ಕದ ಮನೆಯಲ್ಲಿಯೇ ಇದ್ದ ಐದು ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಈ ಪಾಪಿ ಈ ಮಗುವಿದ್ದ ಪಕ್ಕದ ಮನೆಯಲ್ಲಿಯೇ ಬಾಡಿಗೆ ಮನೆ ಹಿಡಿದು ವಾಸವಾಗಿದ್ದ. ಬಾಲಕಿಯ ಪಾಲಕರೊಂದಿಗೆ ಉತ್ತಮ ಸ್ನೇಹ ಬೆಳೆಸಿ ಅವರಿಗೆ ಹತ್ತಿರವಾಗಿದ್ದ.

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಪರಾರಿಯಾಗಿದ್ದಾನೆ. ಆತ ಮನೆಯಿಂದ ಓಡಿ ಹೋಗುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಆ ನಂತರ ಮಗುವನ್ನು ನೋಡಿದಾಗ ಮಗು ಅಳುತ್ತಿತ್ತು. ಅಲ್ಲದೇ, ಪರಿಸ್ಥಿತಿ ಚಿಂತಾಜನಕವಾಗಿತ್ತು.

ಕೂಡಲೇ ಪಾಲಕರು ಹಾಗೂ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದು, ಮಗು ಸಾವು- ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದೆ. ಈ   ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು