Categories: ಒಡಿಸ್ಸಾ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಒಡಿಶಾ, ಆಂಧ್ರಪ್ರದೇಶದಲ್ಲಿ ಚಂಡಮಾರುತ ಸಾಧ್ಯತೆ

ಭುವನೇಶ್ವರ: ಈಶಾನ್ಯ ಮತ್ತು ಪೂರ್ವ-ಮಧ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತವಾಗಿ ಒಡಿಶಾ ಮತ್ತು ಆಂಧ್ರ ಪ್ರದೇಶದ ಕಡೆಗೆ ಚಲಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಚಂಡಮಾರುತದ ಪ್ರಭಾವದಿಂದಾಗಿ ಒಡಿಶಾ ಮತ್ತು ಆಂಧ್ರ ಪ್ರದೇಶ ಕರಾವಳಿ ಪಪ್ರದೇಶಗಳಲ್ಲಿ ಶನಿವಾರದಂದು ಕೆಲವೆಡೆ ಭಾರೀ ಮಳೆ ಮತ್ತು ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

ಒಡಿಶಾದ ಉತ್ತರ ಒಳನಾಡು, ತೆಲಂಗಾಣ ಮತ್ತು ಛತ್ತೀಸ್‌ಗಡದ ಕೆಲ ಭಾಗಗಳಲ್ಲಿ ಭಾನುವಾರವೂ ಭಾರೀ ಮಳೆಯಾಗಬಹುದು. ಅಂತೆಯೇ, ಸೆಪ್ಟೆಂಬರ್ 27ಕ್ಕೆ ಒಡಿಶಾ ಮತ್ತು ತೆಲಂಗಾಣದ ಬೇರೆ ಬೇರೆ ಸ್ಥಳಗಳಲ್ಲಿ ಸಾಧಾರಣ ಮತ್ತು ಅಧಿಕ ಮಳೆಯಾಗುವ ಸಾಧ್ಯತೆ ಇದೆ.

ವಾಯುಭಾರ ಕುಸಿತವು ಆಂಧ್ರ ಪ್ರದೇಶದ ಕಳಿಂಗಪಟ್ಟಣಂನಿಂದ 590 ಕಿಮೀ ಪೂರ್ವಕ್ಕೆ ಮತ್ತು ಗೋಪಾಲ್‌ಪುರದಿಂದ 510 ಕಿಮೀ ಪೂರ್ವ-ಆಗ್ನೇಯಕ್ಕೆ ಕೇಂದ್ರೀಕೃತವಾಗಿದೆ ಎಂದು ಅದು ಹೇಳಿದೆ.

‘ಇದು ಮುಂದಿನ 12 ಗಂಟೆಗಳಲ್ಲಿ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ. ಪಶ್ಚಿಮಕ್ಕೆ ಚಲಿಸಿ, ಸೆಪ್ಟೆಂಬರ್ 26ರ ಸಂಜೆಯ ವೇಳೆಗೆ ಕಳಿಂಗಪಟ್ಟಣಂ ಸುತ್ತ ವಿಶಾಖಪಟ್ಟಣಂ ಮತ್ತು ಗೋಪಾಲಪುರ ನಡುವೆ ಉತ್ತರ ಆಂಧ್ರ ಪ್ರದೇಶ ಮತ್ತು ದಕ್ಷಿಣ ಒಡಿಶಾ ಕರಾವಳಿಯನ್ನು ದಾಟಬಹುದು’ ಎಂದು ಹವಾಮಾನ ಇಲಾಖೆ ಹೇಳಿದೆ.

ಗಾಳಿಯ ವೇಗವು ಗಂಟೆಗೆ 50-60 ಕಿಮೀ ತಲುಪುತ್ತದೆ. ವಾಯುವ್ಯ ಮತ್ತು ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯ ಮೇಲೆ ಗಂಟೆಗೆ 70 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಮುನ್ಸೂಚನೆಯಲ್ಲಿ ತಿಳಿಸಲಾಗಿದೆ. ಗಾಳಿಯ ವೇಗ ಕ್ರಮೇಣ ಗಂಟೆಗೆ 70-80 ಕಿಮೀಗೆ ಏರಬಹುದು. ಭಾನುವಾರದಂದು ಗಂಟೆಗೆ 90 ಕಿಮೀ ವೇಗದಲ್ಲಿ ಗಾಳಿ ಬೀಸಬಹುದು ಎಂದು ಹವಾಮಾನ ಕಚೇರಿ ತಿಳಿಸಿದೆ.

ಮುಂದಿನ ಮೂರು ದಿನಗಳಲ್ಲಿ ಸಮುದ್ರದ ಪರಿಸ್ಥಿತಿ ಅತ್ಯಂತ ಪ್ರಕ್ಷುಬ್ಧವಾಗಲಿದ್ದು, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಆಂಧ್ರಪ್ರದೇಶದ ಮೀನುಗಾರರಿಗೆ ಸೆಪ್ಟೆಂಬರ್ 25 ರಿಂದ ಸೆಪ್ಟೆಂಬರ್ 27 ರವರೆಗೆ ಪೂರ್ವ-ಮಧ್ಯ ಮತ್ತು ಪಕ್ಕದ ಈಶಾನ್ಯ ಬಂಗಾಳಕೊಲ್ಲಿಗೆ ತೆರಳದಂತೆ ತಿಳಿಸಲಾಗಿದೆ.

ಒಡಿಶಾದ ವಿಶೇಷ ಪರಿಹಾರ ಆಯುಕ್ತರು (ಎಸ್‌ಆರ್‌ಸಿ) ಹವಾಮಾನ ಮುನ್ಸೂಚನೆಯ ದೃಷ್ಟಿಯಿಂದ ಮುಂಜಾಗ್ರತೆ ವಹಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

Swathi MG

Recent Posts

ಮುಕ್ಕಾಲು ಕರ್ನಾಟಕಕ್ಕೆ ಸುಡು ಬಿಸಿಲು : ಉಳಿದೆಡೆ ಗುಡುಗು ಸಹಿತ ಮಳೆ

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು…

24 mins ago

ಈ ರಾಶಿಯವರಿಗೆ ಇಂದು ಆಪ್ತರಿಂದ ಆರ್ಥಿಕವಾಗಿ ಸಹಾಯ

ದೈಹಿಕ ಶ್ರಮ ಹೆಚ್ಚಲಿದೆ. ಸಂಶಯಾಸ್ಪದವಾದ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಆಪ್ತರಿಂದ ಸಿಹಿ…

44 mins ago

85 ರೂನಷ್ಟು ಕಡಿಮೆಗೊಂಡ ಚಿನ್ನದ ಬೆಲೆ : ಇಲ್ಲಿದೆ ಇವತ್ತಿನ ದರಪಟ್ಟಿ

ಮೂರ್ನಾಲ್ಕು ವಾರಗಳ ಅದ್ವಿತೀಯ ರೀತಿಯಲ್ಲಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಈ ವಾರ ಶಾಂತಗೊಂಡಿವೆ. ಈ ವಾರ…

1 hour ago

ಇಂದು ವಿಶ್ವ ನಗುವಿನ ದಿನ : ನಾವು ನಗೋಣ, ಇನ್ನೊಬ್ಬರನ್ನು ನಗಿಸೋಣ

ʻನಗುʼ ಇದು ಎಲ್ಲ ಮಾನಸಿಕ ಹಾಗೂ ದೈಹಿಕ ಕಾಯಿಲೆಗಳನ್ನು ದೂರವಿರಿಸುವ ಒಂದು ಅಸ್ತ್ರ.ಹೀಗಾಗಿಯೇ ನಗುವಿನ ಪ್ರಾಮುಖ್ಯತೆಯನ್ನು ಸಾರಲು ವಿಶ್ವದಾದ್ಯಂತ ಮೇ…

1 hour ago

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

9 hours ago

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

9 hours ago