Categories: ಒಡಿಸ್ಸಾ

ಮಗನ ಮುಂದೆಯೇ ತಾಯಿಯ ಮೇಲೆ ಅತ್ಯಾಚಾರ

ಭುವನೇಶ್ವರ್ : ಮಹಿಳೆಯೊಬ್ಬರು ಎರಡೂವರೆ ವರ್ಷದ ಮಗನ ಮುಂದೆ ವ್ಯಕ್ತಿಯೊಬ್ಬನಿಂದ 79 ದಿನಗಳ ಕಾಲ ಸತತ ಅತ್ಯಾಚಾರಕ್ಕೊಳಗಾದ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರು ಶುಕ್ರವಾರ ಸಂತ್ರಸ್ತೆ ಮತ್ತು ಮಗನನ್ನು ಆರೋಪಿ ಕೋಣೆಯಿಂದ ರಕ್ಷಿಸಿದ್ದಾರೆ.

ಈ ವೇಳೆ ಆರೋಪಿಯು ತಲೆಮರೆಸಿಕೊಂಡಿದ್ದು, ಆತನನ್ನು ಹಿಡಿಯಲು ಪೊಲೀಸರು ಜಾಲ ಬೀಸಿದ್ದಾರೆ. 2017 ರಲ್ಲಿ ವಿವಾಹವಾದ ಮಹಿಳೆ, ವರದಕ್ಷಿಣೆಗಾಗಿ ತನ್ನ ಅತ್ತೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ.

ಈ ಹಿಂದೆ ಆರೋಪಿಯು ಮಹಿಳೆಯ ಕುಟುಂಬಕ್ಕೆ ಭಿನ್ನಾಭಿಪ್ರಾಯವನ್ನು ಬಗೆಹರಿಸುವದಾಗಿ ಭರವಸೆ ನೀಡಿ, ಮಹಿಳೆಯನ್ನು ಕರೆದುಕೊಂಡು ಹೋಗಲು ಸಿದ್ಧನಾಗಿದ್ದನು. ಆದರೆ ಅವರು ಆರೋಪಿ ಜೊತೆ ಹೋಗಲು ನಿರಾಕರಿಸಿದರು. ಈ ಹಿನ್ನೆಲೆ ಅತ್ತೆ ಮಹಿಳೆಯನ್ನು ಪ್ರಜ್ಞೆ ಹೋಗುವಂತೆ ಥಳಿಸಿ ವ್ಯಕ್ತಿಯ ಕೋಣೆಯಲ್ಲಿ ಕೂಡಿಟ್ಟಿದ್ದರು. ಪ್ರಜ್ಞೆ ಬಂದ ನಂತರದಲ್ಲಿ ಮಹಿಳೆ ತನ್ನ ಮಗನನ್ನು ಹುಡುಕಲು ಆರಂಭಿಸಿದ್ದು, ಮಗ ಆರೋಪಿಯ ಕೋಣೆಯಲ್ಲಿ ಸಿಕ್ಕಿದ್ದಾನೆ.

ಏಪ್ರಿಲ್ 28 ರಂದು ಆರೋಪಿಯು ತನ್ನ ಮೊಬೈಲ್ ಫೋನ್ ಅನ್ನು ಕೋಣೆಯಲ್ಲಿಯೇ ಬಿಟ್ಟು ಹೋಗಿರುವುದನ್ನು ಮಹಿಳೆ ಕಂಡುಕೊಂಡು ಕೂಡಲೇ ಪೋಷಕರಿಗೆ ಕರೆ ಮಾಡಿ ತನ್ನ ಕಷ್ಟವನ್ನು ವಿವರಿಸಿದ್ದಾರೆ. ಈ ವೇಳೆ ಮಹಿಳೆಯ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಪೊಲೀಸರು ಸ್ಥಳಕ್ಕೆ ತಲುಪುವಷ್ಟರಲ್ಲಿ ಆರೋಪಿಯು ಪರಾರಿಯಾಗಿದ್ದನು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಸೇರಿದಂತೆ ಹಲವು ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Ashika S

Recent Posts

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು

ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…

11 mins ago

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

24 mins ago

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

44 mins ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

52 mins ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

58 mins ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

1 hour ago