Categories: ಒಡಿಸ್ಸಾ

ಸ್ನಾನಕ್ಕೆ ನದಿಗೆ ತೆರಳಿದ 6 ಮಂದಿ ಬಾಲಕರ ದುರ್ಮರಣ: 3 ಮೃತದೇಹಗಳು ಪತ್ತೆ

ಒಡಿಶಾ:  ಒಡಿಶಾದ ಜಾಜ್‌ಪುರದಲ್ಲಿ ಹೋಳಿ ಆಡಿದ ನಂತರ ನದಿಗೆ ಸ್ನಾನ ಮಾಡಲು ತೆರಳಿದ ಆರು ಮಂದಿ ಬಾಲಕರು ನೀರಿನಲ್ಲಿ ಮುಳುಗಿದ್ದಾರೆ. ಈ ವೇಳೆ ಸಾವನ್ನಪ್ಪಿದ ಮೂವರ ಮೃತದೇಹಗಳು ಪತ್ತೆಯಾಗಿದ್ದು, ಇನ್ನುಳಿದವರು ನಾಪತ್ತೆಯಾಗಿರುವ ಘಟನೆ ನಡೆದಿದೆ.

ಒಡಿಶಾದ ಜಾಜ್‌ಪುರದ ಖರಾಸ್ರೋಟಾ ನದಿಯಲ್ಲಿ ಶನಿವಾರ ಮುಳುಗಿ ಸಾವನ್ನಪ್ಪಿದ ಆರು ಬಾಲಕರಲ್ಲಿ ಮೂರು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಇಲಾಖೆ ಮತ್ತು ಒಡಿಶಾ ಡಿಸಾಸ್ಟರ್ ರ್ಯಾಪಿಡ್ ಆಕ್ಷನ್ ಫೋರ್ಸ್ (ODRAF) ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಇಂದು ಬೆಳಗ್ಗೆಯಿಂದಲೂ ಕಾರ್ಯಾಚರಣೆ ಮುಂದುವರೆಯುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯರ ಪ್ರಕಾರ, ಆರು ಮಂದಿ ಬಾಲಕರು ಶನಿವಾರ ಹೋಳಿ ಆಡಿದ ಬಳಿಕ ಸ್ನಾನಕ್ಕೆಂದು ನದಿಗೆ ತೆರಳಿದ್ದರು. ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ, ಅವರಲ್ಲಿ ಒಬ್ಬರು ನದಿಯಲ್ಲಿ ಮುಳುಗುತ್ತಿರುವುದನ್ನು ಅವರು ಗಮನಿಸಿದರು. ಹೀಗೆ ಒಬ್ಬೊಬ್ಬರಾಗಿ ಸ್ನೇಹಿತರನ್ನು ರಕ್ಷಿಸಲು ನದಿಗೆ ಇಳಿದಿದ್ದಾರೆ ಎನ್ನಲಾಗಿದೆ.

Swathi MG

Recent Posts

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

16 mins ago

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

41 mins ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

57 mins ago

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

1 hour ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

2 hours ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

3 hours ago