News Karnataka Kannada
Monday, April 29 2024
ಒಡಿಸ್ಸಾ

ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ: 8 ಮಂದಿ ಸಾವು !

Odisha
Photo Credit : News Kannada

ಒಡಿಶಾ: ಒಡಿಶಾದ ಕಿಯೋಂಜಾರ್ ಜಿಲ್ಲೆಯ NH-20 ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಜನರು ಸಾವನ್ನಪ್ಪಿದ್ದು, 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಯಾಣಿಕರನ್ನು ತುಂಬಿದ್ದ ವ್ಯಾನ್ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ. ಇಂದು (ಡಿ.01) ಬೆಳಗ್ಗೆ ಅಪಘಾತ ಸಂಭವಿಸಿದೆ.

ಪೊದಮರಿ ಗ್ರಾಮದ 20 ಮಂದಿ ಜಿಲ್ಲೆಯ ಮಾ ತಾರಿಣಿ ದೇವಸ್ಥಾನಕ್ಕೆ ವ್ಯಾನ್‌ನಲ್ಲಿ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಈ ಪೈಕಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಘಾಟಗಾಂವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಘಾಟ್‌ಗಾಂವ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಅಪಘಾತದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆದರೆ, ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಕಿಯೋಂಜಾರ್ ಎಸ್ಪಿ ಕುಸಲ್ಕರ್ ನಿತಿನ್ ದಗುಡು ಮಾತನಾಡಿ, 20 ಮಂದಿ ತುಂಬಿದ್ದ ವ್ಯಾನ್ ಅತಿವೇಗದಲ್ಲಿ ಹೋಗುತ್ತಿದ್ದು, ಈ ವೇಳೆ ಟ್ರಕ್‌ಗೆ ಡಿಕ್ಕಿ ಹೊಡೆದಿದೆ, ಮಂಜು ಇದ್ದ ಕಾರಣ ವ್ಯಾನ್ ಅಪಘಾತಕ್ಕೆ ಈಡಾಗಿರಬಹುದು ಎಂದು ಪ್ರಾಥಮಿಕ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು