News Karnataka Kannada
Saturday, April 27 2024
ಒಡಿಸ್ಸಾ

ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ: ಐವರು ಸ್ಥಳದಲ್ಲೇ ಸಾವು

ಕ್ಯಾಂಟರ್ ವಾಹನವೊಂದು ಪಲ್ಟಿಯಾಗಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ಬುಧವಾರ ನಡೆದಿದೆ. 
Photo Credit : News Kannada

ಒಡಿಶಾ: ಒಡಿಶಾದ ಗಂಜಾಂನಲ್ಲಿ ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ  ನಡೆದಿದೆ.

ಗುರುವಾರ ರಾತ್ರಿ ಸೊರಡ ಸಮೀಪದ ಕೇಶರಿಪಟ್ಟಣದಲ್ಲಿ ಈ ಅಪಘಾತ ಸಂಭವಿಸಿದ್ದು, ಎರಡು ದ್ವಿಚಕ್ರ ವಾಹನಗಳಲ್ಲಿ ತಲಾ ಮೂವರು ಪ್ರಯಾಣಿಸುತ್ತಿದ್ದರು.

ಮೃತರನ್ನು ಆಶುರಬಂದ್‌ನ ಶ್ರೀಕಾಂತ್ ಗೌಡ, ದುಲಾದದ ಮನೋಜ್ ಡಾಕುವಾ, ಗೋಪಾಲಪುರ ಸಶನ್‌ನ ಮಹೇಂದ್ರ ನಾಯಕ್, ಸೊರಡದ ಜಯಂತ್ ಬಡತ್ಯ ಮತ್ತು ಸನಾ ಸೊರಡದ ರಜನಿ ಗೌಡ ಎಂದು ಗುರುತಿಸಲಾಗಿದೆ.

ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಜಯಂತ್ ಎಂಕೆಸಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಟ್ಟ ಮಂಜಿನಿಂದಾಗಿ ಗೋಚರತೆ ಕಡಿಮೆಯಿದ್ದ ಕಾರಣ ಈ ಅಪಘಾತ ನಡೆದಿದೆ ಎಂದು ಹೇಳಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು