News Karnataka Kannada
Monday, April 29 2024
ಒಡಿಸ್ಸಾ

ಪುರಿ ಜಗನ್ನಾಥ ದೇವಾಲಯದಲ್ಲಿ ಭಕ್ತರಿಗೆ ಇನ್ಮುಂದೆ ಡ್ರೆಸ್​ಕೋಡ್​ ಕಡ್ಡಾಯ

Dress code mandatory for devotees at Puri Jagannath Temple
Photo Credit : News Kannada

ಒಡಿಶಾ: ಒಡಿಶಾದ ಪುರಿ ಜಗನ್ನಾಥ ದೇವಾಲಯಕ್ಕೆ ಭಕ್ತರು ಇನ್ನುಮುಂದೆ ಜೀನ್ಸ್​, ಸ್ಕರ್ಟ್​ ತೊಟ್ಟು ಬರುವಂತಿಲ್ಲ ಎಂದು ದೇವಸ್ಥಾನದ ಆಡಳಿತ ತಿಳಿಸಿದೆ. ದೇವಾಲಯವು ಜನವರಿ 1 ರಿಂದ ಭಕ್ತರಿಗೆ ಡ್ರೆಸ್ ಕೋಡ್ ಅನ್ನು ಜಾರಿಗೊಳಿಸಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೇವಸ್ಥಾನದಲ್ಲಿ ಕೆಲವರು ಅಸಭ್ಯ ವಸ್ತ್ರಗಳಲ್ಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ‘ನೀತಿ’ ಉಪಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ದೇವಸ್ಥಾನದ ಘನತೆ ಮತ್ತು ಪಾವಿತ್ರ್ಯತೆ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ, ದುರದೃಷ್ಟವಶಾತ್, ಕೆಲವರು ಇತರರ ಧಾರ್ಮಿಕ ಭಾವನೆಗಳನ್ನು ಲೆಕ್ಕಿಸದೆ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವುದು ಕಂಡುಬಂದಿದೆ. ಯಾವ ರೀತಿಯ ಉಡುಪುಗಳನ್ನು ಅನುಮತಿಸಬೇಕು ಎಂಬುದನ್ನು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಶ್ರೀ ಜಗನ್ನಾಥ ದೇವಸ್ಥಾನದ ಆಡಳಿತ ಮುಖ್ಯಸ್ಥ ರಂಜನ್ ಕುಮಾರ್ ದಾಸ್ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು