News Karnataka Kannada
Saturday, May 04 2024
ದೇಶ

ವಿಪಕ್ಷಗಳ ಇಂಡಿಯಾ ಹೆಸರಿನ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾ

ಸುಪ್ರೀಂ ಕೋರ್ಟ್  14 ವರ್ಷದ ಅತ್ಯಾಚಾರ ಸಂತ್ರಸ್ತೆಗೆ 30ನೇ ವಾರದಲ್ಲಿ ಗರ್ಭಪಾತ ಮಾಡಲು ಅನುಮತಿ ನೀಡಿದೆ.
Photo Credit : IANS

ನವದೆಹಲಿ: 26 ವಿರೋಧ ರಾಜಕೀಯ ಪಕ್ಷಗಳು ಮೈತ್ರಿಗಾಗಿ I.N.D.I.A (ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟಲ್ ಇನ್‌ಕ್ಲೂಸಿವ್ ಅಲೈಯನ್ಸ್) ಎಂಬ ಸಂಕ್ಷಿಪ್ತ ರೂಪವನ್ನು ಬಳಸದಂತೆ ತಡೆಯಲು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಈ ಆದೇಶ ನೀಡಿದೆ. ನಂತರ ಅರ್ಜಿದಾರ ರೋಹಿತ್ ಖೇರಿವಾಲ್ ಅದನ್ನು ಹಿಂಪಡೆಯಲು ನಿರ್ಧರಿಸಿದರು. ಕಾಂಗ್ರೆಸ್ ನೇತೃತ್ವದ 26 ವಿರೋಧ ಪಕ್ಷಗಳು ಕಳೆದ ತಿಂಗಳು ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ಒಗ್ಗೂಡಿ ಸ್ಪರ್ಧಿಸುವ ನಿರ್ಧಾರವನ್ನು ಪ್ರಕಟಿಸಿದ್ದವು. ಈ ನಿಟ್ಟಿನಲ್ಲಿ ತಮ್ಮ ಒಕ್ಕೂಟಕ್ಕೆ ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲೈಯನ್ಸ್‌ (I.N.D.I.A) ಹೆಸರಿನಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು