ದೇಶ

ಶೇ.80 ರಷ್ಟು ಭಾರತೀಯರಿಗೆ ಮೋದಿಯೇ ಅಚ್ಚು ಮೆಚ್ಚು: ಸಮೀಕ್ಷೆ

ವಾಷಿಂಗ್ಟನ್: ಭಾರತ ವಿಶ್ವದ ಪ್ರಭಾವಿ ದೇಶವಾಗಿದ್ದು, ಪ್ರಧಾನಿ ಮೋದಿ ಅವರಿಗೆ ಶೇಕಡ 80ರಷ್ಟು ಭಾರತೀಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ಅಮೆರಿಕದ ಚಿಂತಕರ ಚಾವಡಿಯ ಸಂಶೋಧನಾ ವಿಭಾಗದ ಸಮೀಕ್ಷೆಯೊಂದರಲ್ಲಿ ಈ ಮಾಹಿತಿ ಗೊತ್ತಾಗಿದೆ.

ಅಮೆರಿಕ ಚಿಂತಕರ ಚಾವಡಿಯಾಗಿರುವ ಪ್ಯೂ ರಿಸರ್ಚ್ ಸೆಂಟರ್ ಸರ್ವೆ ನಡೆಸಿದ್ದು, ಇದರಲ್ಲಿ ಶೇಕಡ 80ರಷ್ಟು ಮಂದಿ ಪ್ರಧಾನಿ ಮೋದಿಯವರ ಪರ ಒಲವು ವ್ಯಕ್ತಪಡಿಸಿದ್ದಾರೆ.

ಶೇಕಡ 70ರಷ್ಟು ಭಾರತೀಯರು ಭಾರತ ವಿಶ್ವದ ಪ್ರಭಾವಿ ದೇಶವಾಗಿ ಹೊರ ಹೊಮ್ಮಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಭಾರತ ಮತ್ತು ವಿಶ್ವದ ಇತರೆ 23 ದೇಶಗಳ 30,800 ಮಂದಿ ಭಾರತೀಯರನ್ನು ಸಂದರ್ಶಿಸಿ ಈ ಸಮೀಕ್ಷೆ ಸಿದ್ಧಪಡಿಸಲಾಗಿದೆ.

ಶೇಕಡಾ 55 ರಷ್ಟು ಮಂದಿ 2014ರಿಂದ ಭಾರತ ಹೊಸ ದಿಕ್ಕಿನಲ್ಲಿ ಸಾಗುತ್ತಿದೆ ಎಂದಿದ್ದಾರೆ. ಮೋದಿ ಆಡಳಿತದಲ್ಲಿ ನವ ಭಾರತವಾಗಿ ರೂಪುಗೊಂಡಿದೆ. ಮೋದಿ ಆಡಳಿತ ಉತ್ತಮ ಎಂದಿದ್ದಾರೆ.

ಶೇಕಡಾ 55ರಷ್ಟು ಮಂದಿ 2024ರ ಲೋಕಸಭಾ ಚುನಾವಣೆಯಲ್ಲಿ ಮೋದಿ 3ನೇ ಬಾರಿಗೆ ಪ್ರಧಾನಿಯಾಗಲು ಒಲವು ವ್ಯಕ್ತಪಡಿಸಿದ್ದಾರೆ. ಮೋದಿಯೇ ಸೂಕ್ತ ಪ್ರಧಾನಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ದೆಹಲಿಯಲ್ಲಿ ಸೆಪ್ಟೆಂಬರ್ 9 ಹಾಗೂ 10 ರಂದು ನಡೆಯಲಿರುವ ಜಿ20 ಶೃಂಗಸಭೆಗೂ ಒಂದು ವಾರ ಮುನ್ನ ಈ ಅಂಕಿ ಅಂಶ ಬಹಿರಂಗಗೊಂಡಿದೆ. ಇದರೊಂದಿಗೆ ಮೋದಿ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದೆ.
Ashitha S

Recent Posts

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 mins ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

38 mins ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

54 mins ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

1 hour ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

2 hours ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

2 hours ago