Categories: ದೇಶ

ರಾಷ್ಟ್ರ ಉದ್ದೇಶಿಸಿ ಪ್ರಧಾನಿ ಭಾಷಣ: ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಮಹತ್ವ ಸಾರಿದ ಮೋದಿ

ನವದೆಹಲಿ: ಪ್ರಧಾನಿ ಮೋದಿಯವರು ದೆಹಲಿಯ ಕೆಂಪುಕೋಟೆ ಮೇಲೆ 77ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿದರು. ನಂತರ ಪ್ರಧಾನಿ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಿದರು.

ಈ ವೇಳೆ  ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಮಹತ್ವ ಸಾರಿದ ಮೋದಿ, ‘ ದೇಶದ ಮಹಿಳೆಯರಿಗೆ ಶಕ್ತಿ ತುಂಬಿದರು. ಇಂದಿನ ಆಧುನಿಕ ವಿಜ್ಞಾನ, ತಂತ್ರಜ್ಞಾನದಲ್ಲಿ ಮಹಿಳೆಯರು ಹೆಚ್ಚು ಪಾಲ್ಗೊಳ್ಳಬೇಕು. ತಂತ್ರಜ್ಞಾನ ಯುಗದಲ್ಲಿ ಮಹಿಳೆಯರು ಮುನ್ನುಗ್ಗಬೇಕಿದೆ. ಇನ್ನಷ್ಟು ಮಹಿಳೆಯರು ತಂತ್ರಜ್ಞಾನದತ್ತ ಬರಲಿ, ಇದರಿಂದ ದೇಶ ಪ್ರಗತಿ ಕಡೆ ಸಾಗುತ್ತದೆ. ಈಗಾಗಲೇ ಬೇರೆ ದೇಶಕ್ಕಿಂತ ಭಾರತದಲ್ಲಿ ಹೆಚ್ಚು ಮಹಿಳಾ ಪೈಲಟ್​ಗಳನ್ನು ಹೊಂದಿದೆ.

ಇದು ಭಾರತ ಆಧುನಿಕತೆಯತ್ತ ಹೆಜ್ಜೆ ಇಡುತ್ತಿರುವುದು ತೋರಿಸುತ್ತಿದೆ ಎಂದು ಹೇಳಿದರು. ದೇಶವನ್ನು ಮುಂದಕ್ಕೆ ಕೊಂಡೊಯ್ಯುವ ಒಂದು ವಿಷಯವೆಂದರೆ, ಮಹಿಳಾ ನೇತೃತ್ವದ ಅಭಿವೃದ್ಧಿ. ಇಂದು ಭಾರತವು ನಾಗರಿಕ ವಿಮಾನಯಾನದಲ್ಲಿ ಗರಿಷ್ಠ ಸಂಖ್ಯೆಯ ಪೈಲಟ್‌ಗಳನ್ನು ಹೊಂದಿದೆ ಎಂದು ನಾವು ಹೆಮ್ಮೆಯಿಂದ ಹೇಳಬಹುದು. ಅಷ್ಟೇ ಅಲ್ಲದೇ, ಮಹಿಳಾ ವಿಜ್ಞಾನಿಗಳು ಚಂದ್ರಯಾನ ಮಿಷನ್ ಅನ್ನು ಮುನ್ನಡೆಸುತ್ತಿದ್ದಾರೆ.

ಟೆಕ್ನಾಲಾಜಿ, ವಿಜ್ಞಾನ, ವೈದ್ಯಕೀಯ, ಇಂಜಿನಿಯರಿಂಗ್​​ ವಿಭಾಗಗಳಲ್ಲಿ ಹೆಚ್ಚಾಗಿ ಯುವತಿಯರು ಉತ್ಸಾಹದಿಂದ ಸೇರಿಕೊಂಡು ಕಲಿಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಡ್ರೋನ್​ ಬಳಕೆ ಬಗ್ಗೆ ಮಹಿಳಾ ಸ್ವಸಹಾಯ ಸಂಘಗಳಿಗೆ ತರಬೇತಿ ನೀಡಲಾಗುವುದು. ಜನ ಪರ ಕಲ್ಯಾಣಕ್ಕೆ ಹೆಚ್ಚು ಹಣ ವ್ಯಯ ಮಾಡಲಾಗುತ್ತಿದೆ ಎಂದು ಮೋದಿ ಹೇಳಿದರು.

Ashitha S

Recent Posts

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

8 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

14 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

26 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

36 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

57 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

1 hour ago