Categories: ದೇಶ

ದೆಹಲಿ ವಿವಿಯ ಕಾರ್ಯಕ್ರಮಕ್ಕೆ ಮೆಟ್ರೋದಲ್ಲಿ ಬಂದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ದೆಹಲಿ ವಿಶ್ವವಿದ್ಯಾನಿಲಯದ ಕಾರ್ಯಕ್ರಮಕ್ಕೆ ತೆರಳಲು ಸಾಮಾನ್ಯ ಪ್ರಯಾಣಿಕರಂತೆ ಮೆಟ್ರೋ ರೈಲಿನಲ್ಲಿ ತೆರಳಿದ್ದಾರೆ. ಈ ವೇಳೆ ಮೆಟ್ರೋದಲ್ಲಿದ್ದ ಪ್ರಯಾಣಿಕರೊಂದಿಗೆ ಮೋದಿ ಸಂವಾದ ನಡೆಸಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯದ ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಇಂದು ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ವಿಶ್ವವಿದ್ಯಾನಿಲಯದ ಸಂಸ್ಥಾಪನಾ ದಿನದ ಶತಮಾನೋತ್ಸವ ಸಮಾರೋಪ ಸಮಾರಂಭಕ್ಕೆ ಮೋದಿ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ. ಈ ಕಾರ್ಯಕ್ರಮಕ್ಕೆ ತೆರಳಲು ಮೋದಿ, ಟಿಕೆಟ್ ಕೌಂಟರ್‍ಗೆ ತೆರಳಿ ಟಿಕೆಟ್ ಪಡೆದಿದ್ದಾರೆ. ಬಳಿಕ ಮೆಟ್ರೋದಲ್ಲಿ ಜನರ ಪಕ್ಕದಲ್ಲೇ ಕುಳಿತಿದ್ದಾರೆ. ಈ ವೇಳೆ ಜನರೊಂದಿಗೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಪ್ರಧಾನಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಕಪ್ಪು ಉಡುಪುಗಳನ್ನು ಧರಿಸಲು ನಿಷೇಧ ಹೇರಲಾಗಿದೆ. ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಲಾಗಿದೆ.

Ashitha S

Recent Posts

ಪಡೀಲಿನಲ್ಲಿ ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯಕ್ಕೆ ಅಮಾಯಕ ವ್ಯಕ್ತಿ ಬಲಿ !

ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಅಮಾಯಕ ವ್ಯಕ್ತಿಯೊಬ್ಬರು ಪ್ರಾಣ…

3 mins ago

ಮಾಜಿ ಸಚಿವ ಹೆಚ್​.ಡಿ ರೇವಣ್ಣಗೆ ಬಿಗ್ ರಿಲೀಫ್

ಮಾಜಿ ಸಚಿವ ಹೆಚ್​.ಡಿ ರೇವಣ್ಣ ಅವರಿಗೆ 42ನೇ ಎಸಿಎಂಎಂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಮಧ್ಯಂತರ ಜಾಮೀನು ಪಡೆದು ಹೊರಗಿದ್ದ…

24 mins ago

ಎಟಿಎಂ ನಲ್ಲಿ ಹಣ ತೆಗೆದುಕೊಡಿ ಎಂದ ರೈತನಿಗೆ ವಂಚಿಸಿದ ಅಪರಿಚಿತ

ಜಿಲ್ಲೆಯ ಹನೂರು ಪಟ್ಟಣದ ಎಟಿಎಂ ನಲ್ಲಿ ಹಣ ತೆಗೆದುಕೊಡಿ ಎಂದು ಕೇಳಿದ ರೈತನಿಗೆ ಕೀಡಿಗೇಡಿಯೋರ್ವ ವಂಚಿಸಿ ಹಣ ಲಪಾಟಿಸಿರುವ ಘಟನೆ…

25 mins ago

ಅಕ್ರಮ ಕಲ್ಲುಕೋರೆ : ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ಬೃಹತ್ ಪ್ರತಿಭಟನೆ

ಅಕ್ರಮ ಕಲ್ಲುಕೋರೆ ದಾಳಿ ನೆಪದಲ್ಲಿ ಬಿಜೆಪಿ ಯುವ ಮುಖಂಡನ ಬಂಧಸಿದ ಹಿನ್ನಲೆ, ಬೆಳ್ತಂಗಡಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯಲ್ಲಿ…

27 mins ago

ನಿರ್ಮಾಪಕ ನನಗೆ ಬೆದರಿಕೆ ಹಾಕುತ್ತಿದ್ದಾರೆ : ʻಹೆಡ್‌ಬುಷ್‌́ ನಟಿ ಗಂಭೀರ ಆರೋಪ

ಪಂಜಾಬಿ ಬ್ಯೂಟಿ ಪಾಯಲ್‌ ರಜಪೂತ್‌ ಅವರು ನಿರ್ಮಾಪಕರ ವಿರುದ್ಧ ಹೆಡ್‌ಬುಷ್‌ ನಟಿ ಬೆದರಿಕೆ ಹಾಕುತ್ತಿದ್ದಾರೆಂದು ಹೆಡ್‌ಬುಷ್‌ ನಟಿ ಆರೋಪಿಸುತ್ತಿದ್ದಾರೆ. RX…

2 hours ago

ಟಿಪ್ಪರ್- ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ…

2 hours ago