Categories: ದೇಶ

ʻನಷ್ಟ ತುಂಬುವುದು ಕಷ್ಟʼ: ವಿಜಯಕಾಂತ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ವದೆಹಲಿ: ನಟ ಹಾಗೂ ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್  ಅವರು 71ನೇ ವಯಸ್ಸಿಗೆ ನಿಧನ ಹೊಂದಿದ್ದಾರೆ. ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಕೆಲ ದಿನಗಳಿಂದ ಅವರು ವೆಂಟಿಲೇಟರ್ ಸಹಾಯದಲ್ಲಿ ಇದ್ದರು. ಈಗ ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತಪಟ್ಟಿದ್ದಾರೆ. ‘ವಿಜಯಕಾಂತ್ ಅವರನ್ನು ವೆಂಟಿಲೇಟರ್ ಸಹಾಯದಲ್ಲಿ ಇಡಲಾಗಿತ್ತು.

ಆದರೆ, ಎಷ್ಟೇ ಪ್ರಯತ್ನಿಸಿದರೂ ಅವರನ್ನು ಬದುಕಿಸಲು ಸಾಧ್ಯವಾಗಿಲ್ಲ. ಡಿಸೆಂಬರ್ 28ರ ಬೆಳಿಗ್ಗೆ ಅವರು ನಿಧನ ಹೊಂದಿದರು’ ಎಂದು ಆಸ್ಪತ್ರೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ತಿರು ವಿಜಯಕಾಂತ್ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ತಮಿಳು ಚಲನಚಿತ್ರ ಪ್ರಪಂಚದ ದಂತಕಥೆ, ಅವರ ವರ್ಚಸ್ವಿ ಅಭಿನಯವು ಲಕ್ಷಾಂತರ ಜನರ ಹೃದಯವನ್ನು ಗೆದ್ದಿದೆ. ರಾಜಕೀಯ ನಾಯಕರಾಗಿ, ಅವರು ಸಾರ್ವಜನಿಕ ಸೇವೆಗೆ ಆಳವಾಗಿ ಬದ್ಧರಾಗಿದ್ದರು, ತಮಿಳುನಾಡಿನ ರಾಜಕೀಯದ ಮೇಲೆ ಶಾಶ್ವತವಾದ ಪ್ರಭಾವವನ್ನು ಬೀರಿದರು. ನಷ್ಟ ತುಂಬುವುದು ಕಷ್ಟ. ಅವರು ಆತ್ಮೀಯ ಸ್ನೇಹಿತರಾಗಿದ್ದರು ಮತ್ತು ನಾನು ಅವರೊಂದಿಗಿನ ನನ್ನ ಸಂವಾದವನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇನೆ. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ಅವರ ಕುಟುಂಬ, ಅಭಿಮಾನಿಗಳು ಮತ್ತು ಹಲವಾರು ಅನುಯಾಯಿಗಳೊಂದಿಗೆ ಇದೆ. ಓಂ ಶಾಂತಿ” ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಬರೆದುಕೊಂಡು ಸಂತಾಪ ಸೂಚಿಸಿದ್ದಾರೆ.

Ashitha S

Recent Posts

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

16 mins ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

24 mins ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

26 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

46 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

1 hour ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

1 hour ago