News Karnataka Kannada
Monday, April 22 2024
Cricket
ದೇಶ

ಕೈರೋದಲ್ಲಿ ಭಾರತೀಯ ಸಮುದಾಯದಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ

PM Modi
Photo Credit : Twitter

ಪ್ರಧಾನಿ ನರೇಂದ್ರ ಮೋದಿ ಅವರು ಈಜಿಪ್ಟ್​ನಲ್ಲಿ ತಮ್ಮ ಎರಡು ದಿನಗಳ ಭೇಟಿಯನ್ನು ಆರಂಭಿಸುತ್ತಿದ್ದಂತೆ ಅಲ್ಲಿರುವ ಭಾರತೀಯ ಸಮುದಾಯದ ಸದಸ್ಯರು ಅವರನ್ನು ‘ಭಾರತದ ಹೀರೋ’ ಎಂದು ಶ್ಲಾಘಿಸಿದ್ದಾರೆ. 26 ವರ್ಷಗಳಲ್ಲಿ ಈಜಿಪ್ಟ್‌ಗೆ ದ್ವಿಪಕ್ಷೀಯ ಭೇಟಿ ನೀಡಿದ ಮೊದಲ ಪ್ರಧಾನಿ ಮೋದಿಯವರಿಗೆಕೈರೋದಲ್ಲಿ ಭಾರತೀಯ ಸಮುದಾಯದಿಂದ ರಿಟ್ಜ್ ಕಾರ್ಲ್‌ಟನ್ ಹೋಟೆಲ್‌ನಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು, ಈ ವೇಳೆ ಸಾಂಸ್ಕೃತಿಕ ಉಡುಗೆಯಲ್ಲಿ ಸಿಂಗಾರಗೊಂಡು ಸ್ವಾಗತಿಸಿದ ಮಹಿಳೆಯರು ʻಯೇ ದೋಸ್ತಿʼ ಗೀತೆಯನ್ನಾಡುವ ಮೂಲಕ ಮೋದಿ ಅವರನ್ನು ಬರಮಾಡಿಕೊಂಡರು.

ಅಲ್ಲಿ ಅವರು ಪ್ರತ್ಯೇಕ ಗುಂಪುಗಳಲ್ಲಿ ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಿದರು. ಅಮೆರಿಕ ಕಾಂಗ್ರೆಸ್‌ನಲ್ಲಿ ಪ್ರಧಾನಿ ಮಾಡಿದ ಭಾಷಣ ಮತ್ತು ಅವರ ನಾಯಕತ್ವದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಹೆಚ್ಚಿನ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದರು.

ಶನಿವಾರ ಈಜಿಪ್ಟ್‌ಗೆ ತಮ್ಮ ಚೊಚ್ಚಲ ರಾಜ್ಯ ಪ್ರವಾಸವನ್ನು ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ವಲಸಿಗರು ಮತ್ತು ಬೋಹ್ರಾ ಸಮುದಾಯದ ಸದಸ್ಯರನ್ನು ಭೇಟಿ ಮಾಡಿದರು. ಭಾರತದ ದಾವೂದಿ ಬೊಹ್ರಾ ಸಮುದಾಯದ ಸಹಾಯದಿಂದ ಪುನಃಸ್ಥಾಪಿಸಲಾದ ಕೈರೋದ ಐತಿಹಾಸಿಕ ಅಲ್-ಹಕೀಮ್ ಮಸೀದಿಗೆಇಂದು ಭೇಟಿ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಅವರು, ಈಜಿಪ್ಟ್ ನಲ್ಲಿ ಭಾರತೀಯ ವಲಸಿಗರಿಂದ ಸಿಕ್ಕ ಆತ್ಮೀಯ ಸ್ವಾಗತದಿಂದ ತುಂಬ ಸಂತೃಪ್ತಿಗೊಂಡಿರುವೆ. ಅವರ ಸಹಕಾರ ಮತ್ತು ವಾತ್ಸಲ್ಯ ನಮ್ಮ ರಾಷ್ಟ್ರಗಳ ಕಾಲಾತೀತ ಬಂಧವನ್ನು ಮತಷ್ಟು ಗಟ್ಟಿಗೊಳಿಸುತ್ತದೆ ಎಂದಿದ್ಧಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು