News Karnataka Kannada
Tuesday, May 07 2024
ದೇಶ

51,000 ಸಾವಿರ ಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ವಿತರಿಸಿದ ಮೋದಿ

PM Modi
Photo Credit : Twitter

ದೆಹಲಿ: ಪ್ರಧಾನಿ ಮೋದಿ ಅವರು ಇಂದು (ಆ.28) 51,000ಕ್ಕೂ ಹೆಚ್ಚು ಜನರಿಗೆ ರೋಜ್‌ಗಾರ್ ಮೇಳದಡಿಯಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿತರಿಸಿದ್ದಾರೆ.

ದೇಶಾದ್ಯಂತ 45 ಸ್ಥಳಗಳಲ್ಲಿ ರೋಜ್‌ಗಾರ್ ಮೇಳ ನಡೆಯಲಿದೆ ಎಂದು ಪ್ರಧಾನಮಂತ್ರಿಗಳ ಕಚೇರಿ ತಿಳಿಸಿದೆ. ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಅರೆಸೇನಾ ಪಡೆಗಳಲ್ಲಿನ ನೇಮಕಾತಿ ಪ್ರಕ್ರಿಯೆಯನ್ನು ಸರಳೀಕರಿಸಲಾಗಿದ್ದು, ನೇಮಕಾತಿಯ ಸಮಯವನ್ನು ಕಡಿಮೆಗೊಳಿಸಲಾಗಿದೆ ಎಂದು ಅವರು ಹೇಳಿದರು.

ರೋಜ್‌ಗಾರ್ ಮೇಳದ (ಉದ್ಯೋಗ ಮೇಳ)ಮೂಲಕ ಗೃಹ ವ್ಯವಹಾರಗಳ ಸಚಿವಾಲಯವು ಕೇಂದ್ರೀಯ ಮೀಸಲು ಪೊಲೀಸ್ ಪಡೆ, ಗಡಿ ಭದ್ರತಾ ಪಡೆ, ಶಾಸ್ತ್ರ ಸೀಮಾ ಬಾಲ್ ನಂತಹ ವಿವಿಧ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸಿಬ್ಬಂದಿಯನ್ನು ಹಾಗೂ ಅಸ್ಸಾಂ ರೈಫಲ್ಸ್, ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್, ಇಂಡೋ ಟಿಬೆಟಿಯನ್ ಬಾರ್ಡರ್ ಪೋಲೀಸ್ ಗಳಿಗೆ ನೇಮಕಾ ಮಾಡಲಾಗಿದೆ.

ಇನ್ನು ಪ್ರವಾಸೋದ್ಯಮ ಕ್ಷೇತ್ರವು 2030ರ ವೇಳೆಗೆ ಭಾರತೀಯ ಆರ್ಥಿಕತೆಗೆ ₹ 20 ಲಕ್ಷ ಕೋಟಿಗೂ ಹೆಚ್ಚು ಕೊಡುಗೆ ನೀಡುವ ಸಾಧ್ಯತೆಯಿದೆ, ಇದು ಸುಮಾರು 13-14 ಕೋಟಿ ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತದೆ ಎಂದು ಹೇಳಿದರು.

https://twitter.com/i/broadcasts/1yNGaNLvRgDJj

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು