News Karnataka Kannada
Tuesday, May 07 2024
ದೇಶ

ಪ್ರಧಾನಿ ಮೋದಿ ನೇತೃತ್ವದಲ್ಲಿ ವಿಶ್ವಸಂಸ್ಥೆ ಕೇಂದ್ರ ಕಚೇರಿಯಲ್ಲಿ ಯೋಗ ದಿನ ಆಚರಣೆ

modi yoga
Photo Credit : Twitter

ನವದೆಹಲಿ : ಜೂನ್ 21 ಅಂತಾರಾಷ್ಟ್ರೀಯ ಯೋಗ ದಿನವಾಗಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ಯೋಗದ ನೇತೃತ್ವ ವಹಿಸಲಿದ್ದಾರೆ. ಸಾರ್ವತ್ರಿಕ ಮನವಿಯ ಮೇರೆಗೆ ಡಿಸೆಂಬರ್ 2014 ರಲ್ಲಿ, ವಿಶ್ವಸಂಸ್ಥೆಯು ನಿರ್ಣಯದ ಮೂಲಕ ಜೂನ್ 21 ಅನ್ನು ಅಂತರರಾಷ್ಟ್ರೀಯ ಯೋಗ ದಿನವೆಂದು ಘೋಷಿಸಿತು. ಯೋಗಾಭ್ಯಾಸದ ಮಹತ್ವ, ಅನೇಕ ಪ್ರಯೋಜನಗಳ ಕುರಿತು ವಿಶ್ವಾದ್ಯಂತ ಜಾಗೃತಿ ಮೂಡಿಸುವ ಗುರಿಯನ್ನು ಈ ದಿನ ಹೊಂದಿದೆ.

ಅಂತಾರಾಷ್ಟ್ರೀಯ ಯೋಗ ದಿನ ಜಾರಿಗೆ ಬಂದ ಮೇಲೆ ಜಗತ್ತಿನ ಪ್ರತಿಯೊಬ್ಬರೂ ಯೋಗದ ಮಹತ್ವವನ್ನು ತ್ವರಿತವಾಗಿ ಅರ್ಥಮಾಡಿಕೊಂಡಿದ್ದಾರೆ. ತಾವೂ ಅಳವಡಿಸಿಕೊಂಡಿದ್ದಾರೆ. ಅಂತರಾಷ್ಟ್ರೀಯ ಯೋಗ ದಿನವನ್ನು 175 ದೇಶಗಳು ಬಹಳ ಬೇಗನೆ ಬೆಂಬಲಿಸಿದವು. ನಾವು ಅಂತರಾಷ್ಟ್ರೀಯ ಕ್ಯಾಲೆಂಡರ್ ಅನ್ನು ನೋಡಿದಾಗ ಯೋಗದ ಮಹತ್ವ ನಮಗೆಲ್ಲರಿಗೂ ಅರ್ಥವಾಗುತ್ತದೆ.

ಯೋಗಕ್ಕೆ ಅಂತರಾಷ್ಟ್ರೀಯ ಮನ್ನಣೆ ನೀಡುವಂತೆ ಒತ್ತಾಯಿಸುತ್ತಿರುವ ಮತ್ತು ಅಂತರಾಷ್ಟ್ರೀಯ ದಿನಾಚರಣೆಯನ್ನು ಬೆಂಬಲಿಸಿದ ಪ್ರಧಾನಿ ಮೋದಿ ನೇತೃತ್ವದಲ್ಲಿ ಈ ಬಾರಿ ಯೋಗ ದಿನಾಚರಣೆ ನಡೆಯುತ್ತಿರುವುದು ಹೆಮ್ಮೆಯ ಸಂಗತಿ’ ಎಂದು ಭಾರತದಲ್ಲಿ ವಿಶ್ವಸಂಸ್ಥೆಯ ಸಮನ್ವಯಕಾರ ಶೋಂಬಿ ಶಾರ್ಪ್ ಹೇಳಿದ್ದಾರೆ. ಜೂನ್ 21 ರಿಂದ ಜೂನ್ 24 ರವರೆಗೆ ಅಮೆರಿಕೆಗೆ ಮೊದಲ ಅಧಿಕೃತ ಭೇಟಿ ನೀಡುತ್ತಿರುವ ಪ್ರಧಾನಿ ಮೋದಿಯವರನ್ನು ಆತ್ಮೀಯವಾಗಿ ಸ್ವಾಗತಿಸಲು ಬೈಡೆನ್ ದಂಪತಿ ನಿರ್ಧರಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು