Categories: ದೇಶ

ವ್ಯಾಟ್ಸ್ಆ್ಯಪ್ ಚಾನೆಲ್ ನಲ್ಲಿ ಪ್ರಧಾನಿಗೆ ಈಗ 5 ಮಿಲಿಯನ್‌ಗೂ ಅಧಿಕ ಫಾಲೋವರ್ಸ್

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಾಟ್ಸಾಪ್ ಚಾನಲ್ ಜನಪ್ರಿಯತೆ ಹೆಚ್ಚುತ್ತಿದೆ. ದಿನೇ ದಿನೇ ಲಕ್ಷಾಂತರ ಮಂದಿ ಹೊಸ ಫಾಲೋಯರ್​ಗಳು ಮೋದಿ ಚಾನಲ್​ಗೆ ಸೇರಿಕೊಳ್ಳುತ್ತಿದ್ದಾರೆ. ಕೇವಲ 10 ದಿನದಲ್ಲಿ ಅವರ ವಾಟ್ಸಾಪ್ ಕಮ್ಯೂನಿಟಿಗೆ 50 ಲಕ್ಷಕ್ಕೂ ಹೆಚ್ಚು ಮಂದಿ ಸೇರಿದ್ದಾರೆ. ಸೆ.14ರಂದು ಪ್ರಧಾನಿಗಳು ಮೊದಲ ಬಾರಿಗೆ ವಾಟ್ಸಾಪ್​ಗೆ ಅಡಿ ಇಟ್ಟಿದ್ದರು. ಇವತ್ತು 11 ದಿನಗಳ ಬಳಿಕ ಅವರ ಫಾಲೋಯರ್ಸ್ ಸಂಖ್ಯೆ 53 ಲಕ್ಷ ಮುಟ್ಟಿದೆ.

ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಅನುಯಾಯಿಗಳ ಬಳಗ ಹೊಂದಿರುವ ವಿಶ್ವನಾಯಕರಲ್ಲಿ ಪ್ರಧಾನಿ ಮೋದಿ ಒಬ್ಬರು. ಇವರ ಟ್ವಿಟ್ಟರ್ ಮತ್ತು ಫೇಸ್ವುಕ್ ಖಾತೆಗಳಿಗೆ ಬಹಳ ದೊಡ್ಡ ಸಂಖ್ಯೆಯಲ್ಲಿ ಫಾಲೋಯರ್ಸ್ ಇದ್ದಾರೆ. ಈಗ ವಾಟ್ಸಾಪ್ ಚಾನಲ್​ನಲ್ಲೂ ಅವರ ಜನಪ್ರಿಯತೆ ವೇಗವಾಗಿ ಹೆಚ್ಚುತ್ತಿದೆ.

ಇತ್ತೀಚೆಗೆ ವ್ಯಾಟ್ಸ್ಆ್ಯಪ್ ಹೊಸ ಫೀಚರ್ ಆರಂಭಿಸಿತ್ತು. ವ್ಯಾಟ್ಸ್ಆ್ಯಪ್ ಚಾನೆಲ್ ಮೂಲಕ ಅತೀ ದೊಡ್ಡ ಸಂಖ್ಯೆಯಲ್ಲಿ ಜನರನ್ನು ತಲುಪಲು ಸಾಧ್ಯವಿದೆ. ಪ್ರಧಾನಿ ಮೋದಿಯಿಂದ ನೇರವಾಗಿ ಮಾಹಿತಿಗಳು, ಯೋಜನೆಗಳು ಜನರಿಗೆ ತಲುಪಲಿದೆ. ಜನಸಾಮಾನ್ಯರು ಈ ಚಾನಲ್‌ಗೆ ಸೇರ್ಪಡೆಯಾಗುವ ಮೂಲಕ ಪ್ರಧಾನಿ ಮೋದಿ ಅವರು ನೀಡುವ ಮಾಹಿತಿಗಳನ್ನು ಪ್ರತಿಕ್ಷಣವೂ ಪಡೆದುಕೊಳ್ಳಬಹುದಾಗಿದೆ.

Ashitha S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

7 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

7 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

8 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

8 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

9 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

9 hours ago