News Karnataka Kannada
Monday, April 29 2024
ಮಹಾರಾಷ್ಟ್ರ

ಪ್ರಧಾನಿ ಮೋದಿ ಅವರಿಗೆ ‘ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ’ ಗೌರವ

PM Modi
Photo Credit : Twitter

ಪುಣೆ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಮತ್ತು ರಾಷ್ಟ್ರೀಯವಾದಿ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ ಅಧ್ಯಕ್ಷ ದೀಪಕ್ ತಿಲಕ್ ಹೇಳಿದ್ದಾರೆ. ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ ಆಗಸ್ಟ್ 1 ರಂದು ಪುಣೆಯಲ್ಲಿ ಮೋದಿಯವರಿಗೆ ಔಪಚಾರಿಕವಾಗಿ ಪ್ರಶಸ್ತಿಯನ್ನು ಪ್ರದಾನ ಮಾಡಲಿದೆ.

ಲೋಕಮಾನ್ಯ ಬಾಲಗಂಗಾಧರ ತಿಲಕ್ ,ಲಾಲ್-ಬಾಲ್-ಪಾಲ್ ತ್ರಿವಳಿ ರಾಷ್ಟ್ರೀಯವಾದಿಗಳಲ್ಲಿ ಒಬ್ಬರಾಗಿದ್ದರು. ತಿಲಕರ 103ನೇ ಪುಣ್ಯತಿಥಿಯಾದ ಆಗಸ್ಟ್ 1ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಆತ್ಮನಿರ್ಭರ ಭಾರತ ಪರಿಕಲ್ಪನೆಯಡಿಯಲ್ಲಿ ಪ್ರಧಾನ ಮಂತ್ರಿಯವರ ಸರ್ವೋಚ್ಚ ನಾಯಕತ್ವದಲ್ಲಿ ಭಾರತವು ಪ್ರಗತಿಯತ್ತ ಸಾಗಿದ್ದು. ಮೋದಿಯವರು ನಾಗರಿಕರಲ್ಲಿ ದೇಶಭಕ್ತಿಯ ಭಾವನೆಯನ್ನು ಜಾಗೃತಗೊಳಿಸಿದರು ಮತ್ತು ಭಾರತವನ್ನು ಜಾಗತಿಕ ನಕ್ಷೆಯಲ್ಲಿ ಇರಿಸಿದರು. ಅವರ ಪರಿಶ್ರಮ ಮತ್ತು ಪ್ರಯತ್ನಗಳನ್ನು ಪರಿಗಣಿಸಿ ಮತ್ತು ಅವರ ಕೆಲಸವನ್ನು ಮೆಚ್ಚಿ, ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ನ ಟ್ರಸ್ಟಿಗಳು ಅವರನ್ನು ಈ ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
181

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು