News Karnataka Kannada
Sunday, May 12 2024
ದೇಶ

ಜ.12 ರಂದು ಪ್ರಧಾನಿ ಮೋದಿಯಿಂದ ದೇಶದ ಅತಿ ಉದ್ದದ ಸಮುದ್ರ ಸೇತುವೆ ಉದ್ಘಾಟನೆ

New Project 2024 01 01t071137.644
Photo Credit : News Kannada

ಮುಂಬೈ: ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಅನ್ನು ಜ.12 (ಶುಕ್ರವಾರ) ರಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ದೇಶದ ಅತಿ ಉದ್ದದ ಸಮುದ್ರ ಸೇತುವೆಯಾಗಿದೆ.

ಮುಂಬೈನ ಸೆವ್ರಿ ಮತ್ತು ರಾಯಗಡ ಜಿಲ್ಲೆಯ ನ್ಹವಾ ಶೇವಾ ಪ್ರದೇಶದ ನಡುವಿನ 21.8 ಕಿಲೋಮೀಟರ್ ಉದ್ದದ ಸೇತುವೆಯು ಪ್ರಸ್ತುತ ಎರಡು ಗಂಟೆಗಳಿಂದ ಸುಮಾರು 15-20 ನಿಮಿಷಗಳಿಗೆ ಪ್ರಯಾಣದ ಅವಧಿಯನ್ನು ಕಡಿಮೆ ಮಾಡುತ್ತದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ರಾಜ್ಯದ ಎರಡು ದೊಡ್ಡ ನಗರಗಳನ್ನು ಸಂಪರ್ಕಿಸುವ ಮುಂಬೈ ಪುಣೆ ಎಕ್ಸ್‌ಪ್ರೆಸ್‌ವೇಗೆ MTHL ಮತ್ತಷ್ಟು ಸಂಪರ್ಕ ಕಲ್ಪಿಸುತ್ತದೆ. ಸಮುದ್ರದ ಮೇಲೆ 16.50 ಕಿಲೋಮೀಟರ್ ಮತ್ತು ಭೂಮಿಯಲ್ಲಿ 5.50 ಕಿಲೋಮೀಟರ್ ಉದ್ದವನ್ನು ಹೊಂದಿದೆ. ಈ ಸೇತುವೆಗೆ ʼಅಟಲ್ ಬಿಹಾರಿ ವಾಜಪೇಯಿ ಸೇವ್ರಿ-ನವ ಶೇವಾ ಅಟಲ್ ಸೇತುʼ ಎಂದು ಹೆಸರನ್ನು ಇಡಲಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು