ದೇಶ

ಸಾವರ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪಿಎಂ ಮೋದಿ

ಪೋರ್ಟ್ ಬ್ಲೇರ್‌: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಜು.18) ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್‌ನಲ್ಲಿರುವ ವೀರ್ ಸಾವರ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿಗಳು ಮತ್ತು ನಾಗರಿಕ ವಿಮಾನಯಾನ ರಾಜ್ಯ ಸಚಿವ, ಜನರಲ್ (ನಿವೃತ್ತ) ವಿಕೆ ಸಿಂಗ್ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ನಿಸರ್ಗದಿಂದ ಸ್ಫೂರ್ತಿ ಪಡೆದು, ನಿರ್ಮಿಸಲಾದ ವಿಮಾನ ನಿಲ್ದಾಣದ ಟರ್ಮಿನಲ್‌ನ ವಾಸ್ತುಶಿಲ್ಪ ವಿನ್ಯಾಸವು ಚಿಪ್ಪಿನ ಆಕಾರದ ರಚನೆಯನ್ನು ಹೊಂದಿದೆ.ಇದು  ಸಮುದ್ರ ಮತ್ತು ದ್ವೀಪಗಳನ್ನು ಬಿಂಬಿಸುತ್ತದೆ. ಶಾಖ ಹೀರಿಕೊಳ್ಳುವಿಕೆಯನ್ನು ತಗ್ಗಿಸಲು ಡಬಲ್ ಇನ್ಸುಲೇಟೆಡ್ ರೂಫಿಂಗ್ ಸಿಸ್ಟಮ್, ಕಟ್ಟಡದ ಒಳಗೆ ಕೃತಕ ಬೆಳಕಿನ ಅವಶ್ಯಕತೆಯನ್ನು ತಗ್ಗಿಸಲು ಹಗಲಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೈಸರ್ಗಿಕ ಸೂರ್ಯನ ಬೆಳಕಿನ ಗರಿಷ್ಠ ಒಳಹರಿವಿಗೆ ಸ್ಕೈಲೈಟ್‌ಗಳು, ಎಲ್ಇಡಿ ಲೈಟಿಂಗ್, ಶಾಖ ತಗ್ಗಿಸುವ ಗೇನ್ ಗ್ಲೇಜಿಂಗ್ ಮುಂತಾದ ಹಲವಾರು ಸಮರ್ಥನೀಯ ವೈಶಿಷ್ಟ್ಯಗಳನ್ನು ಹೊಸ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವು ಹೊಂದಿದೆ.

ಇಲ್ಲಿ ನಿರ್ಮಿಸಲಾದ ಭೂಮಿಯಡಿಯ ನೀರಿನ ತೊಟ್ಟಿಯಲ್ಲಿ ಮಳೆನೀರಿನ ಸಂಗ್ರಹಣೆ, 100% ಸಂಸ್ಕರಿಸಿದ ತ್ಯಾಜ್ಯನೀರಿನೊಂದಿಗೆ ಆನ್-ಸೈಟ್ ಕೊಳಚೆ ನೀರು ಸಂಸ್ಕರಣಾ ಘಟಕ ಮತ್ತು 500 ಕಿಲೊ ವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಸ್ಥಾವರವು ದ್ವೀಪಗಳ ಪರಿಸರದ ಮೇಲೆ ನಕಾರಾತ್ಮಕ ಪರಿಣಾಮ ಬೀರುವುದನ್ನು ತಗ್ಗಿಸುವುದನ್ನು ಖಾತ್ರಿಪಡಿಸುವುದು ಟರ್ಮಿನಲ್ ಕಟ್ಟಡದ ಕೆಲವು ವೈಶಿಷ್ಟ್ಯಗಳಾಗಿವೆ.

ಇದು ಸ್ಥಳೀಯರಿಗೆ ಉದ್ಯೋಗಾವಕಾಶಗಳ ಸೃಷ್ಟಿಗೆ ಪುಷ್ಟಿ ನೀಡುವುದರ ಜೊತೆಗೆ ಪ್ರದೇಶದ ಆರ್ಥಿಕತೆಯನ್ನು ವೃದ್ಧಿಸಲು ಸಹಾಯ ಮಾಡುತ್ತದೆ.

Ashitha S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

1 hour ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

2 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

2 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

3 hours ago