News Karnataka Kannada
Sunday, May 12 2024
ದೇಶ

2024ರ ಚುನಾವಣೆಯಲ್ಲಿ ಶೇ.50ಕ್ಕೂ ಹೆಚ್ಚು ಮತ ಗಳಿಸಬೇಕು: ಮೋದಿ ಕರೆ

2024ರ ಲೋಕಸಭಾ ಚುನಾವಣೆಯಲ್ಲಿ ಶೇ.50ಕ್ಕೂ ಹೆಚ್ಚು ಮತಗಳನ್ನು ಗಳಿಸುವ ಗುರಿಯನ್ನು ಬಿಜೆಪಿ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ.
Photo Credit : News Kannada

ಹೊಸದಿಲ್ಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಶೇ.50ಕ್ಕೂ ಹೆಚ್ಚು ಮತಗಳನ್ನು ಗಳಿಸುವ ಗುರಿಯನ್ನು ಬಿಜೆಪಿ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ.

ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು ʼಮಿಷನ್ ಮೋಡ್ʼನಲ್ಲಿ ಕೆಲಸ ಮಾಡಲು ನಾಯಕರಿಗೆ ಕರೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿದೆ.

“ನಾವು 2019 ರಲ್ಲಿ 303 ಸ್ಥಾನಗಳನ್ನು ಗೆದ್ದಿದ್ದೇವೆ. ನಾವು ಮಿಷನ್ ಮೋಡ್‌ನಲ್ಲಿ ಕೆಲಸ ಮಾಡಿದರೆ 2024 ರಲ್ಲಿ ಇನ್ನೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತೇವೆ” ಎಂದು ಪ್ರಧಾನಿ ಹೇಳಿದ್ದಾರೆ.

“ಸಾಮಾಜಿಕ ಮಾಧ್ಯಮಗಳಲ್ಲಿ ಪರಿಣಾಮಕಾರಿಯಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಹಾಗೂ, ಪ್ರತಿಪಕ್ಷಗಳ ನಕಾರಾತ್ಮಕ ಪ್ರಚಾರಕ್ಕೆ ಸತ್ಯಗಳೊಂದಿಗೆ ಸಕಾರಾತ್ಮಕ ಉತ್ತರಗಳನ್ನು ನೀಡಬೇಕು” ಎಂದು ಅವರು ಪಕ್ಷದ ವರಿಷ್ಠರಿಗೆ ಸಲಹೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು