ಭೋಪಾಲ್: ಚೀತಾಗಳ ಸರಣಿ ಸಾವಿನ ಹಿನ್ನಲೆಯಲ್ಲಿ ಇಂದು (ಜುಲೈ 19ರಂದು) ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾಜೆಕ್ಟ್ ಚೀತಾ ಸ್ಥಿತಿಗತಿ ಪರಿಶೀಲಿಸಲು ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.
ತೀರಾ ಇತ್ತೀಚೆಗೆ ತೇಜಸ್ ಮತ್ತು ಸೂರಜ್ ಎಂಬ ಎರಡು ಗಂಡು ಚೀತಾಗಳು ಸಾವನ್ನಪ್ಪಿದ ನಂತರ ಈ ಸಭೆ ನಡೆಯುತ್ತಿದೆ.
ಮಧ್ಯಪ್ರದೇಶದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ವನ್ಯಜೀವಿ, ಅಸೀಮ್ ಶ್ರೀವಾಸ್ತವ ಈ ಬಗ್ಗೆ ಮಾಹಿತಿ ನೀಡಿದ್ದು, ಚಿರತೆ ಸ್ಕ್ರೀನಿಂಗ್ ಸಮಿತಿಯ ಸದಸ್ಯರು, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ ವರ್ಚುವಲ್ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
“ಪ್ರಾಜೆಕ್ಟ್ ಚೀತಾ” ಕೇಂದ್ರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಕಳೆದ ವರ್ಷ ಸೆಪ್ಟೆಂಬರ್ 17 ರಂದು ತಮ್ಮ ಜನ್ಮದಿನದಂದು ನಮೀಬಿಯಾದಿಂದ ತಂದ ಎಂಟು ಚೀತಾಗಳನ್ನು ಪ್ರಧಾನಿ ನರೇಂದ್ರ ಮೋದಿ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡುಗಡೆ ಮಾಡಿದ್ದರು. ಮತ್ತೆ ಈ ವರ್ಷ ಫೆಬ್ರವರಿ 18 ರಂದು ದಕ್ಷಿಣ ಆಫ್ರಿಕಾದಿಂದ ಇನ್ನೂ 12 ಚಿರತೆಗಳನ್ನು ತರಲಾಯಿತು.
ಈ ಪೈಕಿ ಎಂಟು ಚಿರತೆಗಳು ಕುನೋದಲ್ಲಿ ಸಾವನ್ನಪ್ಪಿವೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…
ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ ಮಕ್ಕಳ ಮೇಲೆ ಬೀದಿ ನಾಯಿಗಳ ಗ್ಯಾಂಗ್ ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…
ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…
ಸ್ಯಾಂಡಲ್ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…