News Karnataka Kannada
Monday, April 29 2024
ದೇಶ

ವಿಮಾನದಲ್ಲೇ ವೈದ್ಯೆಗೆ ಲೈಂಗಿಕ ಕಿರುಕುಳ: ಪ್ರೊಫೆಸರ್ ಅರೆಸ್ಟ್

Sexually Harassing
Photo Credit : News Kannada

ಮುಂಬೈ: ದೆಹಲಿ-ಮುಂಬೈ ವಿಮಾನದಲ್ಲಿ ಮಹಿಳಾ ವೈದ್ಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 47 ವರ್ಷದ ಪ್ರಾಧ್ಯಾಪಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಇಂದು ತಿಳಿಸಿದ್ದಾರೆ.

ಬುಧವಾರ ಬೆಳಗ್ಗೆ 5:30ಕ್ಕೆ ದೆಹಲಿಯಿಂದ ಟೇಕ್ ಆಫ್ ಆದ ವಿಮಾನದಲ್ಲಿ 24 ವರ್ಷದ ಮಹಿಳಾ ವೈದ್ಯೆ ಪ್ರಯಾಣಿಸುತ್ತಿದ್ದರು.

ಇವರ ಪಕ್ಕದ ಸೀಟಿನಲ್ಲಿಯೇ ಪ್ರೊಫೆಸರ್ ಕುಳಿತಿದ್ದು, ವಿಮಾನ ಮುಂಬೈನಲ್ಲಿ ಲ್ಯಾಂಡ್ ಆಗುವ ಮುನ್ನ ವೈದ್ಯೆಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎನ್ನಲಾಗಿದೆ.

ಇದರಿಂದಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಬಳಿಕ ವಿಚಾರ ವಿಮಾನ ಸಿಬ್ಬಂದಿಯ ಗಮನಕ್ಕೂ ಬಂದಿದೆ. ಕೂಡಲೇ ಸಿಬ್ಬಂದಿ ಮುಂಬೈ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ವಿಮಾನ ಲ್ಯಾಂಡ್ ಆಗುತ್ತಲೆ ಸಹರ್ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು