News Karnataka Kannada
Thursday, May 02 2024
ದೇಶ

‘ಒಂದು ರಾಷ್ಟ್ರ- ಒಂದು ಚುನಾವಣೆ’: ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆ

one nation one election national
Photo Credit :

ನವದೆಹಲಿ: ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ನೇತೃತ್ವದ ‘ಒಂದು ರಾಷ್ಟ್ರ, ಒಂದು ಮತದಾನದ’ ಕುರಿತು ಸರ್ಕಾರವು ಸಮಿತಿಯನ್ನು ರಚಿಸಿದೆ ಎಂದು ಪಿಟಿಐ ವರದಿ ಮಾಡಿದೆ. ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂಬ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸುವ ಕಾರ್ಯಸಾಧ್ಯತೆಯ ಕುರಿತು ತನಿಖೆ ನಡೆಸುವುದು ಸಮಿತಿಯ ಉದ್ದೇಶವಾಗಿದೆ.

ಸೆ.1: ಸೆ.18ರಿಂದ ಸೆ.22ರವರೆಗೆ ವಿಶೇಷ ಸಂಸತ್​​ ಸದನ ನಡೆಯಲಿದೆ ಎಂದು ಕೇಂದ್ರ ಸರ್ಕಾರ ಕಳೆದ ದಿನ (ಆ.31) ತಿಸಿಳಿತ್ತು. ಹಲವು ಮಸೂದೆಯನ್ನು ಮಂಡಿಸಲು ಬಾಕಿ ಇರುವ ಕಾರಣ ಈ ವಿಶೇಷ ಅಧಿವೇಶವನ್ನು ಕರೆಯಲಾಗಿದೆ. ಇದೀಗ ಇದಕ್ಕೂ ಮುನ್ನ ಒಂದು ರಾಷ್ಟ್ರ, ಒಂದು ಚುನಾವಣೆಯ ಸಾಧ್ಯತೆಯನ್ನು ಅಧ್ಯಯನ ಮಾಡಲು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯನ್ನು ಕೇಂದ್ರ ರಚಿಸಲಿದೆ.

ಇನ್ನು ಈಗಾಗಲೇ ಚರ್ಚೆಯಲ್ಲಿರುವ ‘ಒಂದು ರಾಷ್ಟ್ರ-ಒಂದು ಚುನಾವಣೆ’ ಮಸೂದೆಯು ಸ್ವಲ್ಪ ಸಮಯದವರೆಗೆ ಸರ್ಕಾರದ ಕಾರ್ಯಸೂಚಿಯಲ್ಲಿರಲಿದೆ. ಈ ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಅವಕಾಶ ನೀಡುತ್ತದೆ ಎಂದು ಹೇಳಲಾಗಿದೆ.

ಮೂಲಗಳ ಪ್ರಕಾರ, ಸಂಸತ್ತಿನ ಈ ವಿಶೇಷ ಅಧಿವೇಶನದಲ್ಲಿ, ಮೋದಿ ಸರ್ಕಾರವು ‘ಒಂದು ದೇಶ-ಒಂದು ಚುನಾವಣೆ’ ಕುರಿತು ಮಸೂದೆಯನ್ನ ತರಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು