25ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪುದುಚೆರಿ : ದೇಶದ ಯುವಕರು ‘ಸ್ಪರ್ಧಿಸಿ ಮತ್ತು ಗೆಲುವು ಸಾಧಿಸಿ’ ನವ ಭಾರತದ ಮಂತ್ರ ಅಳವಡಿಸಿಕೊಳ್ಳಬೇಕು ಮತ್ತು ಬಲಿಷ್ಠ ರಾಷ್ಟ್ರವನ್ನು ನಿರ್ಮಿಸುವ ಯುದ್ಧಗಳಲ್ಲಿ ಜಯಗಳಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಯುವ ಜನತೆಗೆ ಕರೆ ನೀಡಿದ್ದಾರೆ.

ಬುಧವಾರ ಸ್ವಾಮಿ ವಿವೇಕಾನಂದರ ಅವರ ಜಯಂತಿ ಪ್ರಯುಕ್ತ ಪುದುಚೇರಿಯಲ್ಲಿ ಆಯೋಜಿಸಲಾಗಿರುವ ಎರಡು ದಿನಗಳ 25ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಪ್ರಧಾನಿ, ತ್ಯಾಗ ಬಲಿದಾನಗಳ ಹೊರತಾಗಿಯೂ ಸೂಕ್ತ ಮನ್ನಣೆ ಸಿಗದ ಸ್ವಾತಂತ್ರ್ಯ ಚಳವಳಿಯ ಅಸಾಧಾರಣ ವೀರರ ಬಗ್ಗೆ ಸಂಶೋಧನೆ ಮಾಡಿ ಬರೆಯುವಂತೆ ಸಲಹೆ ನೀಡಿದರು.

ಯುವಕರು ಒಂದಾಗಬೇಕು ಮತ್ತು ಯುದ್ಧಗಳನ್ನು ಗೆಲ್ಲಬೇಕು ಎಂದು ಉತ್ತೇಜಿಸಿದರು. ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್‌ನಲ್ಲಿನ ಪ್ರದರ್ಶನವನ್ನು ಪ್ರಧಾನಿ ಉಲ್ಲೇಖಿಸಿದರು, ಅಲ್ಲಿ ಭಾಗವಹಿಸುವವರು ತಮ್ಮ ಆತ್ಮವಿಶ್ವಾಸದಿಂದ “ಹಿಂದೆಂದೂ ಕಾಣದ” ಪದಕಗಳನ್ನು ಗೆದ್ದಿದ್ದಾರೆ. ಲಸಿಕಾ ಅಭಿಯಾನದಲ್ಲಿ ಯುವಕರು ಅಗಾಧವಾಗಿ ಭಾಗವಹಿಸುತ್ತಿರುವುದು ಅವರ ಗೆಲುವಿನ ಇಚ್ಛೆ ಮತ್ತು ಅವರಲ್ಲಿನ ಜವಾಬ್ದಾರಿಯ ಪ್ರಜ್ಞೆಗೆ ಸಾಕ್ಷಿಯಾಗಿದೆ ಎಂದು ಮೋದಿ ಹೇಳಿದರು.

ಪುದುಚೇರಿಯು ‘ಶ್ರೇಷ್ಠ ಭಾರತ್ ಏಕ್ ಭಾರತ್’ಗೆ ಒಂದು ಸುಂದರ ಉದಾಹರಣೆಯಾಗಿದೆ ಮತ್ತು ಯುವಕರು ಇಲ್ಲಿಂದ ಕಲಿಯಲು ಬಹಳಷ್ಟು ಇದೆ ಎಂದು ಮೋದಿ ಹೇಳಿದರು.

ಭಾರತವೊಂದು ಭರವಸೆ, ನಂಬಿಕೆ ಎಂಬಂತೆ ಇಡೀ ಜಗತ್ತು ನಮ್ಮ ರಾಷ್ಟ್ರದ ಕಡೆಗೆ ನೋಡುತ್ತಿದೆ. ಯಾಕೆಂದರೆ ಇಲ್ಲಿನ ಜನರ ಯುವ ಮನಸ್ಥಿತಿ ಹೊಂದಿದ್ದಾರೆ. ಭಾರತದ ಸಾಮರ್ಥ್ಯ, ಕನಸು, ಆಲೋಚನೆ, ಪ್ರಜ್ಞೆಗಳೆಲ್ಲ ಯೌವ್ವನದಲ್ಲೇ ಇವೆ. ಹೀಗಾಗಿ ಸದಾ ಮುನ್ನೆಡೆಯುತ್ತಲೇ ಇರುತ್ತದೆ ಎಂದು ಪ್ರಧಾನಿ ಮೋದಿ ವ್ಯಾಖ್ಯಾನಿಸಿದರು.

Gayathri SG

Recent Posts

ಹಣ್ಣಕ್ಕೆ ಬೇಡಿಕೆ ಇಟ್ಟು ಮರ್ಮಾಂಗಕ್ಕೆ ವಿದ್ಯುತ್​ ಶಾಕ್​ ನೀಡಿ ಚಿತ್ರಹಿಂಸೆ

ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…

21 mins ago

ಮಾಜಿ ಸಿಎಂ ಎಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ: ಕಾಂಗ್ರೆಸ್​ ಶಾಸಕ

ಹೆಚ್​ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…

33 mins ago

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

52 mins ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

54 mins ago

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

1 hour ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

1 hour ago