Categories: ಪಂಜಾಬ್

ಆಪ್‌ ಪಕ್ಷವು ರಾಷ್ಟ್ರೀಯ ರಾಜಕಾರಣದಲ್ಲಿ ಕಾಂಗ್ರೆಸ್‌ಗೆ ಪರ್ಯಾಯವಾಗಲಿದೆ: ಆಪ್‌ ನಾಯಕ

ಪಂಜಾಬ್‌ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷವು ಅಭೂತಪೂರ್ವ ಗೆಲುವು ದಾಖಲಿಸಿದ ಬೆನ್ನಲ್ಲೇ ಆಪ್‌ ನಾಯಕ ನಾಯಕ ರಾಘವ್ ಚಡ್ಡಾ ಪ್ರತಿಕ್ರಿಯೆ ನೀಡಿದ್ದು, ಮುಂದಿನ ದಿನಗಳಲ್ಲಿ ಆಪ್‌ ಪಕ್ಷವು ರಾಷ್ಟ್ರೀಯ ಶಕ್ತಿಯಾಗಿ ಹೊರಹೊಮ್ಮಲಿದ್ದು, ಕಾಂಗ್ರೆಸ್‌ ಗೆ ಪರ್ಯಾಯ ಶಕ್ತಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆಪ್‌ ಪಕ್ಷದ ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ನಿವಾಸದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಚಾಡ್ಡಾ, ಇದೀಗ ಇಡೀ ದೇಶವು ಅರವಿಂದ್ ಕೇಜ್ರಿವಾಲ್ ಮಾದರಿಯ ಆಡಳಿತವನ್ನು ಎದುರು ನೋಡುತ್ತಿದೆ. ಪಂಜಾಬ್‌ನ ಜನರು ‘ಪೊರಕೆ’ (ಎಎಪಿ ಚಿಹ್ನೆ) ಮೂಲಕ ರಾಜ್ಯವನ್ನು ಸ್ವಚ್ಛಗೊಳಿಸಿದ್ದಾರೆ ಎಂದು ಹೇಳಿದರು.

ಸಾಂಪ್ರದಾಯಿಕ ಪಕ್ಷಗಳಾದ ಶಿರೋಮಣಿ ಅಕಾಲಿದಳ ಮತ್ತು ಕಾಂಗ್ರೆಸ್‌ನ ಯುಗ ಪಂಜಾಬ್‌ನಲ್ಲಿ ಅಂತ್ಯಗೊಂಡಿದೆ. ಪಂಜಾಬಿಗರಿಗೆ ಎಎಪಿ ಪಕ್ಷವು ಸ್ವಚ್ಛ ಮತ್ತು ಪ್ರಾಮಾಣಿಕ ಆಡಳಿತವನ್ನು ನೀಡಲಿದೆ ಎಂದು ಎಎಪಿ ರಾಜ್ಯ ವ್ಯವಹಾರಗಳ ಸಹ-ಪ್ರಭಾರಿಯೂ ಆಗಿರುವ ಚಡ್ಡಾ ಹೇಳಿದ್ದಾರೆ.

ಎಎಪಿಯ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ಭಯೋತ್ಪಾದಕ ಎಂದು ಕರೆಯುವ ಮೂಲಕ ಎಎಪಿ ವಿರುದ್ಧ ನಕಾರಾತ್ಮಕ ಪ್ರಚಾರ ನಡೆಸಿದ ವಿಪಕ್ಷಗಳ ವಿರುದ್ಧ ಅವರು ಇದೇವೇಳೆ ಕಿಡಿಕಾರಿದರು. ಕೇಜ್ರಿವಾಲ್ ಅವರು ಸಕಾರಾತ್ಮಕ ಕಾರ್ಯಸೂಚಿಯನ್ನು ಹೊಂದಿದ್ದಾರೆ. ಅವರ ಅಭಿವೃದ್ಧಿ ಕಾರ್ಯಕ್ರಮಗಳ ಫಲಶೃತಿ ಪಂಜಾಬ್‌ ಚೂನಾವಣೆ ಫಲಿತಾಂಶ ರೂಪದಲ್ಲಿ ಜನರ ಮುಂದಿದೆ ಎಂದು ಹೇಳಿದರು.

ಪಂಜಾಬ್ ನ 117 ವಿಧಾನಸಭಾ ಸ್ಥಾನಗಳ ಪೈಕಿ 91 ಕ್ಷೇಗಳಲ್ಲಿ ಮುನ್ನಡೆ ಸಾಧಿಸಿರುವ ಆಮ್ ಆದ್ಮಿ ಪಕ್ಷ ಪಂಜಾಬ್‌ ಚುನಾವಣೆಯಲ್ಲಿ ಹೊಸ ಭಾಷ್ಯ ಬರೆದಿದೆ.

Sneha Gowda

Recent Posts

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

6 mins ago

ಹಾಸನ ವಿಡಿಯೋ ಪ್ರಕರಣ: ಡಿ.ಕೆ. ಶಿವಕುಮಾರ್‌ ಪಿತೂರಿ ಇದೆ ಎಂದ ಎಚ್‌.ಡಿ. ಕುಮಾರಸ್ವಾಮಿ

ಹಾಸನ ಅಶ್ಲೀಲ ವಿಡಿಯೋಗಳ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಪಿತೂರಿ ಎದ್ದು ಕಾಣುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ…

21 mins ago

ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

39 mins ago

ನಾಲ್ಕು ವರ್ಷಗಳ ನಂತರ ಧಾರವಾಡಕ್ಕೆ ಕಾಲಿಟ್ಟ ಶಾಸಕ ವಿನಯ್ ಕುಲಕರ್ಣಿ

ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಹೈಕೋರ್ಟ್‌ ಅನುಮತಿ ಮೇರೆಗೆ ಮಂಗಳವಾರ…

57 mins ago

ಲೋಕಸಭೆ ಚುನಾವಣೆ: ಮೂರನೇ ಹಂತದ ಮತದಾನ ಮುಕ್ತಾಯ

ದೇಶದಾದ್ಯಂತ ಮೂರನೇ ಹಂತದ ಮತದಾನ ಮುಕ್ತಾಯವಾಗಿದೆ. ಬೆಳಗ್ಗ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಿತು. ಸಣ್ಣಪುಟ್ಟ ಗಲಾಟೆಗಳನ್ನು…

1 hour ago

ಅನಿಮೇಟೆಡ್ ವಿಡಿಯೋ ‘ತಕ್ಷಣ’ ತೆಗೆದುಹಾಕುವಂತೆ ಬಿಜೆಪಿಗೆ ಚುನಾವಣಾ ಆಯೋಗ ಆದೇಶ

ಮುಸ್ಲಿಂ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಕರ್ನಾಟಕ ಘಟಕ ಹಂಚಿಕೊಂಡಿರುವ ಅನಿಮೇಟೆಡ್ ಕಾರ್ಟೂನ್ ವಿಡಿಯೋವನ್ನು 'ತಕ್ಷಣ' ತೆಗೆದುಹಾಕುವಂತೆ…

2 hours ago