ಪಂಜಾಬ್

ಕಾಂಗ್ರೆಸ್ ಕಾರ್ಯಕರ್ತರಿದ್ದ ಬಸ್ ಅಪಘಾತ, ಐವರ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಚಂಢೀಘರ್, – ಕಾಂಗ್ರೆಸ್ ಕಾರ್ಯಕರ್ತರಿದ್ದ ಖಾಸಗಿ ಮಿನಿಬಸ್ ರಾಜ್ಯ ಸಾರಿಗೆ ಇಲಾಖೆಯ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಪಂಜಾಬ್‍ನ ಮೊಗ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಚಂಡೀಘರ್‍ನ ಪಂಜಾಬ್ ಕಾಂಗ್ರೆಸ್ ಭವನದಲ್ಲಿ ನಡೆಯುತ್ತಿದ್ದ ಪಂಜಾಬ್ ಪ್ರದೇಶ ಕಾಂಗ್ರೆಸ್ ಕಮಿಟಿಗೆ ನವಜೋತ್ ಸಿದ್ದು ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಸಮಾರಂಭದಲ್ಲಿ ಪಾಲ್ಗೊಳ್ಳಲು ಈ ಕಾಂಗ್ರೆಸ್ ಕಾರ್ಯಕರ್ತರು ಇಂದು ತೆರಳಿದ್ದರು.
ಮೊಗ ಜಿಲ್ಲೆಯಿಂದ ಚಂಡೀಘರ್‍ಗೆ ಹೊರಟಿದ್ದ ಸಂದರ್ಭದಲ್ಲಿ ಸಾರಿಗೆ ಬಸ್ ಮುಖಾಮುಖಿಯಾಗಿದ್ದರಿಂದ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಎರಡು ಬಸ್‍ಗಳ ಚಾಲಕರು ಸೇರಿದಂತೆ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ಮೊಗಾದ ಹಿರಿಯ ಎಸ್‍ಎಸ್‍ಪಿ ಹರ್ಮಾನ್‍ಬೀರ್ ತಿಳಿಸಿದ್ದಾರೆ.
ಘಟನೆಗೆ ಸಂತಾಪ ವ್ಯಕ್ತಪಡಿಸಿರುವ ಗುಜರಾತ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್, ರಕ್ಷಣಾ ಕಾರ್ಯಚರಣೆ ಕೈಗೊಂಡು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವುದಾಗಿ ಟ್ವೀಟ್ ಮಾಡಿದ್ದಾರೆ. ಪಂಜಾಬ್ ಕಾಂಗ್ರೆಸ್ ಘಟಕ ಕೂಡ ದುರಂತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತಪಟ್ಟವರ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸಿದೆ.

Indresh KC

Recent Posts

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

14 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

42 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

3 hours ago