Categories: ಪಂಜಾಬ್

ಗೋಲ್ಡನ್ ಟೆಂಪಲ್ ನಲ್ಲಿ ಹಾರ್ಮೋನಿಯಂ ಬಳಕೆ ನಿಷೇಧ

ಪಂಜಾಬ್​:  ಪಂಜಾಬ್​​ನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಗೋಲ್ಡನ್​ ಟೆಂಪಲ್​ ಖ್ಯಾತಿಯ ಹರ್ಮಂದಿರ್ ಸಾಹಿಬ್ ಒಳಗೆ ಹಾರ್ಮೋನಿಯಂ ಬಳಕೆಯನ್ನು ನಿಷೇಧಿಸಲಾಗಿದೆ. ಈ ಮೂಲಕ ನೂರಕ್ಕೂ ಹೆಚ್ಚು ವರ್ಷಗಳ ಬಳಿಕ ಹಾರ್ಮೋನಿಯಂ ಸದ್ದು ನಿಧಾನವಾಗಿ ನಿಲ್ಲಲಿದೆ.

ಗೋಲ್ಡನ್​ ಟೆಂಪಲ್​ನಲ್ಲಿ​ ಹಾರ್ಮೋನಿಯಂ ಬಳಕೆ ನಿಲ್ಲಿಸುವಂತೆ ಅಕಾಲ್ ತಖ್ತ್​ನ ಮುಖ್ಯಸ್ಥ ಹರ್‌ಪ್ರೀತ್ ಸಿಂಗ್ ಆದೇಶಿಸಿದ್ದಾರೆ. ಈ ಆದೇಶವನ್ನು ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿಯು ಜಾರಿಗೊಳಿಸಲು ನಿರ್ಧರಿಸಿದೆ.

ಹಾರ್ಮೋನಿಯಂ ಗುರು ಸಾಹಿಬ್‌ಗಳು ಬಳಸುವ ವಾದ್ಯವಲ್ಲ. ಆದರೆ, ಇದು ಭಾರತೀಯರಿಗೆ ಬ್ರಿಟಿಷರು ಒದಗಿಸಿದ ವಾದ್ಯವಾಗಿದೆ. ಇದನ್ನು ಬ್ರಿಟಿಷರ ಆಳ್ವಿಕೆಯಲ್ಲಿ ಭಾರತಕ್ಕೆ ತರಲಾಯಿತು ಎಂದು ಹರ್‌ಪ್ರೀತ್ ಸಿಂಗ್ ಆದೇಶದಲ್ಲಿ ತಿಳಿಸಿದ್ದಾರೆ.

ಗೋಲ್ಡನ್​ ಟೆಂಪಲ್​ನಲ್ಲಿ​ ಹಾರ್ಮೋನಿಯಂ ಬಳಕೆಯನ್ನು ಏಕಾಏಕಿ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಆದರೆ, ಕ್ರಮೇಣವಾಗಿ ಅವರ ಬಳಕೆ ನಿಲ್ಲಿಸಲಾಗುತ್ತದೆ. ಇದರಿಂದ ಗೋಲ್ಡನ್ ಟೆಂಪಲ್​ಗೆ ಬರುವ ಭಕ್ತರಿಗೂ ಪರಿಪಾಠವಾಗಲಿದೆ. ಇನ್ಮುಂದೆ ಹೆಚ್ಚಾಗಿ ಕೀರ್ತನಾ ಸಮಯದಲ್ಲಿ ಹಾರ್ಮೋನಿಯಂ ಸ್ಥಾನದಲ್ಲಿ ಸಾಂಪ್ರದಾಯಿಕ ವಾದ್ಯಗಳನ್ನು ಬಳಸಲಾಗುವುದು ಎಂದು ತಿಳಿಸಲಾಗಿದೆ.

Ashika S

Recent Posts

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

9 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

15 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

26 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

37 mins ago

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

47 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

53 mins ago