ನವದೆಹಲಿ: ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ರಾಜ್ಯಾಧ್ಯಕ್ಷರ ಸ್ಥಾನವನ್ನು ಬದಲಾವಣೆ ಮಾಡುವ ನಿಟ್ಟಿನಲ್ಲಿ, ರಾಜೀನಾಮೆ ನೀಡುವಂತೆ ಸೂಚಿಸಿದ್ದರು.
ಈ ಹಿನ್ನಲೆಯಲ್ಲಿ ಇದೀಗ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ. ಇವರಲ್ಲದೇ ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರದ ಪಿಸಿಸಿ ಅಧ್ಯಕ್ಷರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚನೆ ಮೇರೆಗೆ ರಾಜೀನಾಮೆ ಸಲ್ಲಿಸಲಿದ್ದಾರೆ.