ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆ ಭಾನುವಾರ ಆಪ್ ನಾಯಕರು ವಿಜಯೋತ್ಸವದ ರೋಡ್ ಶೋ ನಡೆಸಿದರು.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹಾಗೂ ಪಂಜಾಬ್ನ ನಿಯೋಜಿತ ಮುಖ್ಯಮಂತ್ರಿ ಭಗವಂತ್ ಮನ್ ಭರ್ಜರಿ ರೋಡ್ ಶೋನಲ್ಲಿ ಭಾಗವಹಿಸಿದ್ದರು.
ಇನ್ನು ಭಗವಂತ್ ಮಾನ್ ಬುಧವಾರ (ಮಾ.16) ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಮಾನ್ ಸಚಿವ ಸಂಪುಟದಲ್ಲಿ 16 ಜನರಿಗೆ ಸ್ಥಾನ ಸಿಗಲಿದ್ದು, ಸಚಿವರು ಮುಂದಿನ ದಿನಗಳಲ್ಲಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
ಬುಧವಾರ ನಿಯೋಜಿತ ಮುಖ್ಯಮಂತ್ರಿ ಭಗವಂತ್ ಮಾನ್ ಏಕಾಂಗಿಯಾಗಿ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರ ಭಗತ್ ಸಿಂಗ್ ಅವರ ಹುಟ್ಟೂರಾದ ಖತ್ಕರ್ಕಲನ್ ಗ್ರಾಮದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.