ಪಂಜಾಬ್

ಪಂಜಾಬ್ ವಿಧಾನಸಭಾ ಚುನಾವಣೆಯನ್ನು ಮುಂದೂಡಬೇಕೆಂದು ಆಯೋಗಕ್ಕೆ ಪತ್ರ ಬರೆದ ಸಿಎಂ ಚನ್ನಿ

ಚಂಡೀಗಢ : ಪಂಜಾಬ್ ವಿಧಾನಸಭಾ ಚುನಾವಣೆಯನ್ನು ಮುಂದೂಡಬೇಕೆಂದು ಕೋರಿ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ, ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರಿಗೆ ಸಿಎಂ ಚನ್ನಿ ಪತ್ರ ಬರೆದಿದ್ದು, ವಿಧಾನಸಭಾ ಚುನಾವಣೆಯನ್ನು ಕನಿಷ್ಠ ಆರು ದಿನಗಳವರೆಗೆ ಮುಂದೂಡಬೇಕು ಎಂದಿದ್ದಾರೆ. ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ಚನ್ನಿ ಅವರು ಈ ಮನವಿ ಮಾಡಿಕೊಂಡಿದ್ದಾರೆ. ಪಂಜಾಬ್‌ನ 117 ವಿಧಾನಸಭಾ ಸ್ಥಾನಗಳಿಗೆ ಫೆಬ್ರುವರಿ 14ರಂದು ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.

ಗುರು ರವಿದಾಸ್ ಅವರ ಜನ್ಮ ದಿನಾಚರಣೆಯ ಸಂದರ್ಭ, ಫೆ. 10ರಿಂದ 16ರವರೆಗಿನ ಅವಧಿಯಲ್ಲಿ ಸುಮಾರು 20 ಲಕ್ಷದಷ್ಟು ಸಂಖ್ಯೆಯ ಜನರು ಉತ್ತರ ಪ್ರದೇಶದ ಬನಾರಸ್‌ಗೆ ತೆರಳುತ್ತಾರೆ. ಇದರಿಂದ ಅವರು ಮತದಾನದಿಂದ ವಂಚಿತರಾಗುತ್ತಾರೆ. ಹೀಗಾಗಿ ಅವರಿಗೂ ಮತದಾನದ ಅವಕಾಶ ಕಲ್ಪಿಸುವ ಸಲುವಾಗಿ ಚುನಾವಣೆಯನ್ನು ಮುಂದೂಡಬೇಕು ಎಂದಿ ಚನ್ನಿ ಕೇಳಿಕೊಂಡಿದ್ದಾರೆ.

ಈ ಮೊದಲು ಬಹುಜನ ಸಮಾಜ ಪಕ್ಷದ ಪಂಜಾಬ್ ಮುಖ್ಯಸ್ಥ ಜಸ್ವೀರ್ ಸಿಂಗ್ ಗಾರ್ಹಿ, ಚುನಾವಣೆ ಮುಂದೂಡುವಂತೆ ಆಯೋಗವನ್ನು ಕೇಳಿಕೊಂಡಿದ್ದರು.

Gayathri SG

Recent Posts

ಕೇಜ್ರಿವಾಲ್‌ ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಜೊತೆ ತಿರುಗಾಟ: ನಿರ್ಮಲಾ ಸೀತಾರಾಮನ್‌

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ…

1 min ago

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

24 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

34 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

39 mins ago

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

46 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

56 mins ago