News Karnataka Kannada
Monday, April 29 2024
ಪಂಜಾಬ್

ಪಂಜಾಬ್ ಸರ್ಕಾರದಿಂದ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಇಳಿಕೆ

Petrol Main Newsk 5721678124
Photo Credit :

ಪಂಜಾಬ್ : ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಇಳಿಕೆಗೊಳಿಸಿದ ಬಳಿಕ ಅನೇಕ ರಾಜ್ಯಗಳು ಕಡಿಮೆ ಮಾಡುತ್ತಿದ್ದು, ಇದೀಗ ಪಂಜಾಬ್ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕ್ರಮವಾಗಿ ರೂ 10 ಮತ್ತು ರೂ 5 ರಷ್ಟು ಕಡಿಮೆ ಮಾಡುವುದಾಗಿ ಘೋಷಿಸಿದೆ.

ಮುಖ್ಯಮಂತ್ರಿ ಚರಣ್​​ಜಿತ್ ಸಿಂಗ್ ಚನ್ನಿ ಅವರು ಡೀಸೆಲ್ ಮೇಲೆ ವಿಧಿಸಲಾದ ಮೌಲ್ಯವರ್ಧಿತ ತೆರಿಗೆಯಲ್ಲಿನಇಳಿಕೆಯಿಂದಾಗಿ ಬೆಲೆಗಳನ್ನು ಕಡಿಮೆ ಮಾಡಿದ್ದಾರೆ ಎಂದು ಹೇಳಿದರು. ಪೆಟ್ರೋಲ್ ಮತ್ತು ಡೀಸೆಲ್ ಪರಿಷ್ಕೃತ ದರ ಸೋಮವಾರದಿಂದ ಜಾರಿಗೆ ಬರಲಿದೆ.

ರಾಜ್ಯದ ಬೊಕ್ಕಸಕ್ಕೆ ವಾರ್ಷಿಕವಾಗಿ 1000 ಕೋಟಿ ವೆಚ್ಚವಾಗಲಿದೆ. 70 ವರ್ಷಗಳಲ್ಲಿ ಇಂತಹ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ ಚನ್ನಿ, ಪಂಜಾಬ್‌ನಲ್ಲಿ ಪೆಟ್ರೋಲ್ ಈ ಪ್ರದೇಶದಲ್ಲಿ ಅಗ್ಗವಾಗಿದೆ ಎಂದು ಹೇಳಿದರು. ದೆಹಲಿಗೆ ಹೋಲಿಸಿದರೆ, ಪಂಜಾಬ್‌ನಲ್ಲಿ ಪೆಟ್ರೋಲ್ ಈಗ 9 ರೂಪಾಯಿ ಕಡಿಮೆಯಾಗಿದೆ ಎಂದು ಅವರು ಹೇಳಿದರು.

ಇಂಧನ ಬೆಲೆ ಏರಿಕೆಯಾಗುತ್ತಲೇ ಇದ್ದು, ಕೇಂದ್ರ ಸರ್ಕಾರ ಕಳೆದ ವಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 5 ರೂಪಾಯಿ ಮತ್ತು ಡೀಸೆಲ್‌ಗೆ 10 ರೂಪಾಯಿ ಕಡಿತಗೊಳಿಸುವುದಾಗಿ ಘೋಷಿಸಿದೆ. ಪ್ರಸ್ತುತ, ಪಂಜಾಬ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕ್ರಮವಾಗಿ ಲೀಟರ್‌ಗೆ 106.20 ಮತ್ತು 89.83 ರೂ ಆಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು