ಚಂಡೀಗಢ: ಲುಧಿಯಾನದ ವಸತಿ ಪ್ರದೇಶದ ಕಾರ್ಖಾನೆಯಿಂದ ಅನಿಲ ಸೋರಿಕೆಯಾದ ಪರಿಣಾಮ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಅಸ್ವಸ್ಥರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋರಿಕೆಯಾದ ನಂತರ ಹಲವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಐಎಎನ್ಎಸ್ ಗೆ ತಿಳಿಸಿದ್ದಾರೆ.
ಇಡೀ ಪ್ರದೇಶವನ್ನು ಸೀಲ್ ಮಾಡಲಾಗಿದೆ ಮತ್ತು ಸ್ಥಳೀಯರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಸುಮಾರು 10 ಜನರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅನಿಲ ಪೀಡಿತರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.