Categories: ಪಂಜಾಬ್

ಮತ್ತೊಮ್ಮೆ ಆರಂಭವಾಗುತ್ತ ದೆಹಲಿ ರೈತ ಚಳುವಳಿ?

ಚಂಡೀಗಢ: ರೈತರ ಐತಿಹಾಸಿಕ ‘ಡಿಲ್ಲಿ ಚಲೋ’ ಆಂದೋಲನದ ಮೂರನೇ ವರ್ಷಾಚರಣೆ ಮತ್ತು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿಯ ಭರವಸೆ ಮುಂತಾದ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸದ ಹಿನ್ನೆಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಅಡಿಯಲ್ಲಿ ರೈತ ಸಂಘಗಳು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿವೆ.

ಮೂರು ದಿನಗಳ ಪ್ರತಿಭಟನೆಯ ಭಾಗವಾಗಿ ಪಂಜಾಬ್ ಮತ್ತು ಹರಿಯಾಣದ ಸಾವಿರಾರು ರೈತರು ಭಾನುವಾರ ರ‍್ಯಾಲಿ ಆರಂಭಿಸಿದ್ದಾರೆ. ನಾವು ದೂರದ ಪ್ರಯಾಣಕ್ಕೆ ಸಿದ್ಧರಾಗಿ ಬಂದಿದ್ದೇವೆ ಎಂದು ಸರ್ಕಾರಗಳನ್ನು ರೈತರನ್ನು ಎಚ್ಚರಿಸಿದ್ದಾರೆ. ಅನೇಕರು ತಮ್ಮ ಟ್ರ್ಯಾಕ್ಟರ್-ಟ್ರೇಲರ್‌ಗಳಲ್ಲಿ ತರಕಾರಿಗಳು, ಹಿಟ್ಟು ಮತ್ತು ಉದ್ದಿನ ಚೀಲ ಮತ್ತು ಅಡುಗೆ ಎಣ್ಣೆ ತಂದಿದ್ದಾರೆ. ರೈತರು, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಸೇರಿದ್ದಾರೆ. ಪ್ರತಿಭಟನಾ ನಿರತ ರೈತರು ಪಂಜಾಬ್‌ನ ಮೊಹಾಲಿ ಮತ್ತು ಹರಿಯಾಣದ ಪಂಚಕುಲದ ಗಡಿಗಳಲ್ಲಿ ಜಮಾಯಿಸುತ್ತಿದ್ದಾರೆ.

ಈ ನಡುವೆ ಚಂಡೀಗಢಕ್ಕೆ ರೈತರ ಪ್ರವೇಶವನ್ನು ತಡೆಯಲು ಪೊಲೀಸರನ್ನು ನಿಯೋಜಿಸಲಾಗಿದೆ.
ಸಮಾವೇಶಗೊಂಡ ರೈತರು ಟೆಂಟ್‌ ಹಾಕಿ ಅಡುಗೆ ಆರಂಭಿಸಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸದ ಕೇಂದ್ರ ಸರ್ಕಾರದ ವಿರುದ್ಧ ರೈತ ಸಂಘಗಳು ರಾಜಭವನದತ್ತ ಪ್ರತಿಭಟನೆ ನಡೆಸಲಿವೆ ಎಂದು ಎಸ್‌ಕೆಎಂನ ಸಮನ್ವಯ ಸಮಿತಿ ಸದಸ್ಯ ದರ್ಶನ್ ಪಾಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಅಗತ್ಯ ಬಿದ್ದರೆ ಅನಿರ್ದಿಷ್ಟಾವಧಿವರೆಗೆ ಧರಣಿ ನಡೆಸುವುದಾಗಿ ಅವರು ಹೇಳಿದ್ದಾರೆ.

ನಾವು ಎರಡು ತಿಂಗಳವರೆಗೆ ಅಗತ್ಯವಿರುಷ್ಟು ಪಡಿತರ ಕೊಂಡೊಯ್ಯುತ್ತಿದ್ದೇವೆ ಎಂದು ಖನ್ನಾ ಪಟ್ಟಣದ ರೈತ ಸರ್ಬ್ಜಿತ್ ಸಿಂಗ್ ಹೇಳಿದ್ದಾರೆ. ಪಂಜಾಬ್ ಮತ್ತು ಹರಿಯಾಣದಲ್ಲಿ ಕೀಟಗಳ ದಾಳಿ ಮತ್ತು ಪ್ರವಾಹದಿಂದ ಹಾನಿಗೊಳಗಾದ ಬೆಳೆಗಳಿಗೆ ಪರಿಹಾರ ನೀಡುವ ರೈತ ಸಂಘಗಳು ಸರ್ಕಾರವನ್ಜು ಒತ್ತಾಯಿಸಿವೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಚಂಡೀಗಢ ಗಡಿಯುದ್ದಕ್ಕೂ ಕೆಲವು ರಸ್ತೆ ಸಂಚಾರ ತಪ್ಪಿಸಲು ಪಂಜಾಬ್ ಮತ್ತು ಹರಿಯಾಣ ಪೊಲೀಸರು ಪ್ರಯಾಣ ಸಲಹೆಯನ್ನು ನೀಡಿದ್ದಾರೆ.

Ashika S

Recent Posts

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

17 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

22 mins ago

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

37 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

43 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

54 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

1 hour ago