News Karnataka Kannada
Monday, May 06 2024
ಪಂಜಾಬ್

ವಿಪರೀತ ತಾಪಮಾನ: ಪಂಜಾಬ್‌ ಮತಗಟ್ಟೆಗಳಲ್ಲಿ ಏರ್‌ ಕೂಲರ್‌, ಫ್ಯಾನ್‌ ಅಳವಡಿಕೆ

‌ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ಈ ನಿಟ್ಟಿನಲ್ಲಿ ಪಂಜಾಬ್‌ನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯ ಮತಗಟ್ಟೆಗಳಲ್ಲಿ ಏರ್‌ ಕೂಲರ್‌, ಫ್ಯಾನ್‌ ಅಳವಡಿಸಲಾಗುತ್ತದೆ.
Photo Credit : NewsKarnataka

ಚಂಡೀಗಢ: ‌ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ಈ ನಿಟ್ಟಿನಲ್ಲಿ ಪಂಜಾಬ್‌ನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯ ಮತಗಟ್ಟೆಗಳಲ್ಲಿ ಏರ್‌ ಕೂಲರ್‌, ಫ್ಯಾನ್‌ ಅಳವಡಿಸಲಾಗುತ್ತದೆ. ಜೊತೆಗೆ ಮತದಾರರಿಗೆ ನೀರು, ತಂಪು ಪಾನೀಯ ಹಾಗೂ ಇತರ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಈ ಕುರಿತು ಜಿಲ್ಲಾಧಿಕಾರಿಗಳು ಸಂಬಂಧಪಟ್ಟವರಿಗೆ ಸೂಚನೆ ನೀಡಿದ್ದಾರೆ ಎಂದು ಪಂಜಾಬ್‌ನ ಮುಖ್ಯ ಚುನಾವಣಾಧಿಕಾರಿ ಸಿಬಿನ್‌ ಸಿ. ಅವರು ಹೇಳಿದ್ದಾರೆ.

ಈ ವರ್ಷ ಪಂಜಾಬ್‌ನಲ್ಲಿ ಅಧಿಕ ತಾಪಮಾನ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಮತದಾರರಿಗೆ ಕುಡಿಯುವ ನೀರು, ತಂಪು ಪಾನೀಯ ನೀಡಬೇಕು ಎಂದು ಚುನಾವಣಾ ಆಯೋಗವು ಕಳೆದ ತಿಂಗಳು ನಿರ್ದೇಶನ ನೀಡಿತ್ತು. ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆಯೂ ಆದೇಶಿಸಿದ್ದು, ಜೂನ್‌ 1ರಂದು ಪಂಜಾಬ್‌ನಲ್ಲಿ ಲೋಕಸಭಾ ಚುನಾವಣೆಯ ಮತದಾನ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು