ಜಲಂಧರ್: ಆಘಾತಕಾರಿ ಘಟನೆಯೊಂದರಲ್ಲಿ ರೆಫ್ರಿಜರೇಟರ್ನ ಕಂಪ್ರೆಸರ್ ಸ್ಫೋಟಗೊಂಡು ಒಂದೇ ಕುಟುಂಬದ ಐವರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಪಂಜಾಬ್ನ ಜಲಂಧರ್ನಲ್ಲಿ ನಡೆದಿದೆ. ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಸ್ಫೋಟದ ನಂತರ ಮನೆಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅವರು ಹೇಳಿದ್ದಾರೆ.
ಮೃತರನ್ನು ಯಶಪಾಲ್ ಘಾಯ್ (70), ರುಚಿ ಘಾಯ್ (40), ಮನ್ಶಾ (14), ದಿಯಾ (12) ಮತ್ತು ಅಕ್ಷಯ್ (10) ಎಂದು ಗುರುತಿಸಲಾಗಿದೆ. ಸ್ಫೋಟದ ನಿಖರವಾದ ಕಾರಣ ಕಂಡುಹಿಡಿಯಲು ಮಾದರಿ ಸಂಗ್ರಹಿಸಲು ವಿಧಿವಿಜ್ಞಾನ ತಜ್ಞರ ತಂಡವನ್ನು ಕರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಲಂಧರ್ನ ಅವತಾರ್ ನಗರದಲ್ಲಿನ ಮನೆಯೊಂದರಲ್ಲಿ ಸ್ಫೋಟದ ರೀತಿಯ ಘಟನೆಯ ಬಗ್ಗೆ ನಮಗೆ ಮಾಹಿತಿ ಬಂದಿದ್ದು, ಸ್ಥಳಕ್ಕೆತೆರಳಿ ರಕ್ಷಣಾ ಕಾರ್ಯಾಚರಣೆ ಮಾಡುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.