Categories: ಪಂಜಾಬ್

ಗುರು ಗ್ರಂಥ ಸಾಹೀಬ್​ ಪುಟಗಳನ್ನು ಹರಿದ ಯುವಕ : ಹೊಡೆದು ಕೊಂದ ಸ್ಥಳೀಯರು

ಪಂಜಾಬ್‌: ಪಂಜಾಬ್‌ನ ಗುರುದ್ವಾರವೊಂದರಲ್ಲಿ ಪೂಜ್ಯ ಗುರು ಗ್ರಂಥ ಸಾಹಿಬ್‌ನ ಪುಟಗಳನ್ನು ಹರಿದ ಆರೋಪದ ಮೇಲೆ 19 ವರ್ಷದ ಯುವಕನನ್ನು ಹೊಡೆದು ಹತ್ಯೆ ಮಾಡಲಾಗಿದೆ. ಬಂಡಲ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೊಲೆಯಾದವನು ಬಕ್ಷೀಶ್ ಸಿಂಗ್ ಎಂದು ಗುರುತಿಸಲಾಗಿದೆ.ಯುವಕ ಗುರುದ್ವಾರದ ಆವರಣಕ್ಕೆ ಪ್ರವೇಶಿಸಿದ ಪವಿತ್ರ ಪುಸ್ತಕದ ಕೆಲವು ಪುಟಗಳನ್ನು ಹರಿದು ಹಾಕಿದ್ದ ತಕ್ಷಣ ಆತನನ್ನು ಜನ ಹಿಡಿದು ಹೊಡೆದು ಸಾಯಿಸಿದ್ದಾರೆ.

ಬಕ್ಷೀಶ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಪೊಲೀಸರ ಪ್ರಕಾರ, ಬಕ್ಷೀಶ್ ಪುಟಗಳನ್ನು ಹರಿದು ಪರಾರಿಯಾಗಲು ಪ್ರಯತ್ನಿಸಿದಾಗ ಪರಿಸ್ಥಿತಿ ಉಲ್ಬಣಗೊಂಡಿತು. ಘಟನೆಯ ಮಾಹಿತಿ ತಿಳಿದ ಸ್ಥಳೀಯರು ಆತನನ್ನು ಬಂಧಿಸಿದ್ದು, ಗುರುದ್ವಾರದಲ್ಲಿ ಜಮಾಯಿಸಿ ಬಕ್ಷೀಶ್‌ನನ್ನು ತೀವ್ರವಾಗಿ ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀ ಗುರು ಗ್ರಂಥ ಸಾಹಿಬ್ ಸತ್ಕರ್ ಸಮಿತಿಯ ಅಧ್ಯಕ್ಷ ಲಖ್ವೀರ್ ಸಿಂಗ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295-ಎ ಅಡಿಯಲ್ಲಿ ಬಕ್ಷೀಶ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

Nisarga K

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

37 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

51 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

1 hour ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

1 hour ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

1 hour ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

2 hours ago