Categories: ಪಂಜಾಬ್

ಗೆಳತಿಗಾಗಿ ಹೆಣ್ಣು ವೇಷ ತೊಟ್ಟು ಪರೀಕ್ಷೆ ಬರೆಯಲು ಬಂದು ಸಿಕ್ಕಿಬಿದ್ದ ಗೆಳೆಯ

ಪಂಜಾಬ್: ಪಂಜಾಬ್ ನ ಫರೀದ್ ಕೋಟ್ ನಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ವ್ಯಕ್ತಿಯೋರ್ವ ಗೆಳತಿಯ ಪರೀಕ್ಷೆ ಬರೆಯಲು ಹೆಣ್ಣು ವೇಷ ತೊಟ್ಟು ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.

ಫಾಜಿಲ್ಕಾ ಮೂಲದ ಆಂಗ್ರೇಜ್ ಸಿಂಗ್ ಬಂಧಿತ ಆರೋಪಿ.

ಬಾಬಾ ಫರೀದ್ ಹೆಲ್ತ್ ಯೂನಿವರ್ಸಿಟಿಯಲ್ಲಿ ಮಲ್ಟಿ ಪರ್ಪಸ್ ಹೆಲ್ತ್ ವರ್ಕರ್ ಹುದ್ದೆಗೆ ಪರೀಕ್ಷೆ ಬರೆಯಲು ಆಂಗ್ರೇಸ್ ಸಿಂಗ್ ಕೊಟ್ಕಾಪುರದ ಡಿಎವಿ ಪಬ್ಲಿಕ್ ಸ್ಕೂಲ್ ಗೆ ಬಂದಿದ್ದ.

ಬಯೋಮೆಟ್ರಿಕ್ ಪರಿಶೀಲನೆ ವೇಳೆ ಸಿಕ್ಕಿಬಿದ್ದಿದ್ದಾನೆ. ಬೆರಳಚ್ಚು ಹೊಂದಿಕೆಯಾಗದಿದ್ದಾಗ ಅಧಿಕಾರಿಗಳಿಗೆ ವಂಚನೆ ಅರಿವಾಗಿದೆ.

ಇನ್ವಿಜಿಲೇಟರ್ ಕೈಗೆ ಸಿಕ್ಕಿಬೀಳುವುದನ್ನು ತಪ್ಪಿಸಲು ಯುವಕ ಮಹಿಳೆಯ ವೇಷದಲ್ಲಿ ಪರೀಕ್ಷೆಗೆ ಹಾಜರಾಗಿದ್ದು, ಇದರ ಜೊತೆಗೆ ಮತದಾರರ ಗುರುತಿನ ಚೀಟಿ, ಆಧಾರ್ ಸೇರಿದಂತೆ ಗುರುತಿನ ಚೀಟಿಗಳನ್ನು ನಕಲಿ ಮಾಡಲಾಗಿತ್ತು, ಮಹಿಳೆಯರ ಬಟ್ಟೆಯ ಹೊರತಾಗಿ, ತುಟಿಗಳಿಗೆ ಲಿಪ್ಸ್ಟಿಕ್, ಬಳೆಗಳನ್ನು ಧರಿಸಿದ್ದ.

ಪೊಲೀಸರು ಆಂಗ್ರೇಸ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.  ಪರಮ್‌ಜಿತ್ ಕೌರ್ ಅವರ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ashika S

Recent Posts

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

20 mins ago

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

41 mins ago

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

55 mins ago

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

1 hour ago

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

2 hours ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

2 hours ago