News Karnataka Kannada
Monday, May 06 2024
ದೇಶ

ನಾಯಿ ತಿನ್ನಲಿಲ್ಲ ಎಂದು ಅದೇ ಬಿಸ್ಕತ್ತನ್ನು ಕಾರ್ಯಕರ್ತನಿಗೆ ಕೊಟ್ಟ ರಾಹುಲ್

Raaga
Photo Credit : News Kannada

ದೆಹಲಿ: ಭಾರತ್​ ಜೋಡೋ ನ್ಯಾಯ ಯಾತ್ರೆ ಸಂದರ್ಭದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ನಾಯಿಗೆ ಹಾಕಿದ್ದ ಬಿಸ್ಕತ್ತನ್ನೇ ತೆಗೆದು ಕಾರ್ಯಕರ್ತನಿಗೆ ನೀಡಿರುವ ವಿಡಿಯೋ ವೈರಲ್ ಆಗಿದೆ.

ರಾಹುಲ್ ಗಾಂಧಿ ಅವರ ರೋಡ್​ ಶೋ ವೇಳೆ ಅವರ ಜತೆ ಒಂದು ನಾಯಿಯೂ ಇತ್ತು, ಅದಕ್ಕೆ ರಾಹುಲ್ ಗಾಂಧಿ ಬಿಸ್ಕತ್ತು ಹಾಕುತ್ತಿದ್ದರು, ಆದರೆ ಆ ನಾಯಿ ತಿನ್ನುತ್ತಿರಲಿಲ್ಲ, ಅದೇ ಸಮಯದಲ್ಲಿ ಕಾರ್ಯಕರ್ತರೊಬ್ಬರು ರಾಹುಲ್ ಗಾಂಧಿಯನ್ನು ಮಾತನಾಡಿಸಿದರು ಆಗ ರಾಹುಲ್ ನಾಯಿಗೆ ಹಾಕಿದ್ದ ಬಿಸ್ಕತ್ತಲ್ಲೇ ಒಂದು ಬಿಸ್ಕತ್ತನ್ನು ತೆಗೆದು ಕಾರ್ಯಕರ್ತನಿಗೆ ನೀಡಿದ್ದರು. ಈ ವಿಡಿಯೋ ವೈರಲ್ ಆಗಿದೆ.

ಇನ್ನು ಎಕ್ಸ್​ನಲ್ಲಿ ಬಿಜೆಪಿ ಐಟಿ ಸೆಲ್​ನ ಅಮಿತ್ ಮಾಳವೀಯ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬೂತ್ ಏಜೆಂಟರನ್ನು ನಾಯಿಗಳಿಗೆ ಹೋಲಿಸಿದ್ದರು. ಪಕ್ಷದ ಅಧ್ಯಕ್ಷ ಹಾಗೂ ಮಾಜಿ ಅಧ್ಯಕ್ಷರು ತನ್ನ ಕಾರ್ಯಕರ್ತನನ್ನು ನಾಯಿಯಂತೆ ನಡೆಸಿಕೊಂಡರೆ ಅಂತಹ ಪಕ್ಷವು ಕಣ್ಮರೆಯಾಗುವುದು ಪಕ್ಕಾ ಎಂದು ಮಾಳವೀಯ ಬರೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು