News Karnataka Kannada
Monday, April 15 2024
Cricket
ರಾಜಸ್ಥಾನ

ಕುಲದೇವರ ದರ್ಶನಕ್ಕೆ ತೆರಳುತ್ತಿದ್ದಾಗ ಅಪಘಾತ, ಒಂದೇ ಕುಟುಂಬದ 6 ಮಂದಿ ಸಾವು

Accident.
Photo Credit :

ಜೋದ್‍ಪುರ್:  ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ  ಕುಲದೇವತೆಯ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಜೋದ್‍ಪುರ್ ನಲ್ಲಿ ನಡೆದಿದೆ.

ಚುರು ಗ್ರಾಮದ ನಿವಾಸಿಗಳಾದ ವಿಜಯ್ ಸಿಂಗ, ಉದಯ್ ಪ್ರತಾಪ್ ಸಿಂಗ್, ಮಂಜು ಕನ್ವರ್, ಪ್ರವೀಣ್‍ಸಿಂಗ್, ದರ್ಪಣ್ ಸಿಂಗ್ ಮತ್ತು ಮಧು ಕೌವಾರ್ ಸಾವನ್ನಪ್ಪಿರುವ ದುರ್ದೈವಿಗಳು.

ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೆ ಮೂವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಬಿಲಾರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇವರೆಲ್ಲರೂ ನಾಗಾಣ ಕುಲದೇವಿ ದರ್ಶನಕ್ಕೆ ಬುಲೇರೋ ವಾಹನದಲ್ಲಿ ತೆರಳುತ್ತಿದ್ದರು. ಬಿಲಾರ ಸಮೀಪದ ಜುರ್ಲಿಫಾಂಟಾ ಬಳಿ ರಾತ್ರಿ 1 ಗಂಟೆ ಸುಮಾರಿಗೆ ರಸ್ತೆಯಲ್ಲಿ ನಿಂತಿದ್ದ ಟ್ರಕ್‍ನ ಹಿಂಬದಿಗೆ ಬುಲೆರೋ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದಾರೆ.

ಮಾಹಿತಿ ತಿಳಿದ ಕೂಡಲೇ ಬಿಲಾಡ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿ ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಜಿಲ್ಲಾಕಾರಿ ಹಿಮಾಂಶು ಗುಪ್ತ , ಎಂಡಿಎಂ ಆಸ್ಪತ್ರೆಗೆ ತೆರಳಿ ಗಾಯಾಳುಗಳಿಗೆ ಚಿಕಿತ್ಸೆ ವ್ಯವಸ್ಥೆ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು